ಜೂನ್ 8ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ, ಬಿರುಗಾಳಿಯ ಮುನ್ಸೂಚನೆ 

07-06-24 11:06 pm       Mangalore Correspondent   ಕರಾವಳಿ

ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜೂನ್ 8 ಮತ್ತು 9ರಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಮಂಗಳೂರು, ಜೂನ್ 7: ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜೂನ್ 8 ಮತ್ತು 9ರಂದು ಆರೆಂಜ್ ಅಲರ್ಟ್ ಘೋಷಿಸಿದೆ.

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ರೀತಿಯ ವಾತಾವರಣ ಉಂಟಾಗಿದ್ದು ಕರಾವಳಿ ಭಾಗದಲ್ಲಿ ಗಾಳಿ ಮಳೆಯ ಸೂಚನೆ ನೀಡಲಾಗಿದೆ. 45ರಿಂದ 65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 11ರ ವರೆಗೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ದಾವಣಗೆರೆ, ಉತ್ತರ ಕನ್ನಡ ಭಾಗದಲ್ಲಿ ಉತ್ತಮ ಮಳೆಯಾಗಿದ್ದರೂ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆ ಇನ್ನೂ ಬಿರುಸು ಪಡೆದಿಲ್ಲ‌. ಮುಂಗಾರು ಆಗಮನ ಆಗಿದೆಯೇ ಇಲ್ಲವೇ ಎನ್ನುವ ರೀತಿಯ ವಾತಾವರಣ ಇದೆ. ಇಡೀ ದಿನ ಹಗಲಿನಲ್ಲಿ ಮೋಡದ ವಾತಾವರಣ ಮತ್ತು ಸಂಜೆ ಹೊತ್ತಿಗೆ ಹನಿ ಹನಿ ಮಳೆ ಮಾತ್ರ ಸುರಿದಿದೆ.

The met department has predicted heavy rains in some districts of the state, including the coastal areas, in the next three days. The Meteorological Department has issued an orange alert for the coastal districts on June 8 and 9.