ಬ್ರೇಕಿಂಗ್ ನ್ಯೂಸ್
14-06-24 10:33 pm Mangalore Correspondent ಕರಾವಳಿ
ಮಂಗಳೂರು, ಜೂ.14: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ನಾಲ್ಕು ಘಟಕ ಕಾಲೇಜುಗಳನ್ನು ನಿರ್ವಹಣೆಗಾಗಿ ಸರ್ಕಾರಕ್ಕೆ ಬರೆಯಲಾಗಿದ್ದರೂ, ಅನುಮತಿ ದೊರಕಿಲ್ಲ. ವಿವಿಯಲ್ಲಿ ಆರ್ಥಿಕ ಸಮಸ್ಯೆ ಇರುವುದರಿಂದ ಘಟಕ ಕಾಲೇಜು ನಡೆಸಿಕೊಂಡು ಹೋಗುವುದು ಕಷ್ಟವಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರು ಹಾಗೂ ರಾಜ್ಯಪಾಲರಿಗೆ ಪತ್ರ ಬರೆದರೂ ಪ್ರಯೋಜನ ಆಗಿಲ್ಲ ಎಂದು ಮಂಗಳೂರು ವಿವಿಯ ಕುಲಪತಿ ಡಾ.ಪಿ.ಎಲ್.ಧರ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಬನ್ನಡ್ಕ ಹಾಗೂ ನೆಲ್ಯಾಡಿಯ ಘಟಕ ಕಾಲೇಜು, ಮಂಗಳೂರು ವಿವಿ ಕ್ಯಾಂಪಸಿನ ಘಟಕ ಕಾಲೇಜು, ವಿವಿ ಕಾಲೇಜಿನ ಸಂಧ್ಯಾ ಕಾಲೇಜು ಏಳೆಂಟು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಅವುಗಳ ಸ್ಟಾಚ್ಯೂಟ್‌ಗೆ ಸರಕಾರದಿಂದ ಅನುಮತಿ ದೊರಕಿಲ್ಲ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರಿಗೂ ಪತ್ರ ಬರೆಯಲಾಗಿದೆ ಎಂದವರು ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಈ ಹಿಂದೆ ಇದ್ದಂತಹ ಆಂತರಿಕ ಸಂಪತ್ತಿನ ಕ್ರೋಢೀಕರಣ ಶಕ್ತಿಯೀಗ ನಶಿಸಿದೆ. ಆಳ್ವಾಸ್, ಫಿಲೋಮಿನಾ, ವಿವೇಕಾನಂದ ಕಾಲೇಜುಗಳು ಸ್ವಾಯತ್ತ ಕಾಲೇಜು ಆಗಿರುವುದರಿಂದ ಅವುಗಳಿಂದ ಬರುತ್ತಿದ್ದ ಶುಲ್ಕ, ಇನ್ನಿತರ ಹಣಕಾಸು ಮೂಲ ಸಿಗುತ್ತಿಲ್ಲ. ಕೊರೊನಾ ಬಳಿಕ ಸರಕಾರದಿಂದ ಅನುದಾನವೂ ಬರುತ್ತಿಲ್ಲ. ಇದರಿಂದಾಗಿ ಘಟಕ ಕಾಲೇಜುಗಳ ನಿರ್ವಹಣೆಗೆ ಕಷ್ಟವಾಗಿದ್ದು ಉಪನ್ಯಾಸಕರು, ಸಿಬ್ಬಂದಿಗೆ ಮೂರ‌್ನಾಲ್ಕು ತಿಂಗಳಿಗೊಮ್ಮೆ ವೇತನ ನೀಡುವ ಸ್ಥಿತಿ ಎದುರಾಗಿದೆ. ವಿವಿಗೆ ಆದಾಯ ನೀಡುತ್ತಿದ್ದ ದೂರ ಶಿಕ್ಷಣ ಕೇಂದ್ರವನ್ನು ಸರಕಾರದ ಆದೇಶದ ಮೇರೆಗೆ ಮುಚ್ಚಲಾಗಿದೆ. ಮಂಗಳೂರು ವಿವಿಯ ಆಂತರಿಕ ಸಂಪನ್ಮೂಲ ಕಾಲೇಜುಗಳ ಶುಲ್ಕ, ವಿವಿಧ ಸರ್ಟಿಫಿಕೇಟ್‌ಗಳಿಂದ ಬರುವ ಮೊತ್ತಕ್ಕೆ ಸೀಮಿತಗೊಂಡಿದೆ. ಯುಜಿಸಿ ಪ್ರಾಜೆಕ್ಟ್‌ಗಳು, ಕೈಗಾರಿಕೆಗಳಿಂದ ದೊರೆಯುತ್ತಿದ್ದ ಆದಾಯವೂ ಕಡಿಮೆ ಆಗಿದೆ. ಈ ಎಲ್ಲದರ ಬಗ್ಗೆ ಸರಕಾರದ ಗಮನ ಸೆಳೆಯಲಾಗಿದೆ. ಮಂಗಳೂರು ವಿವಿ ಕ್ಯಾಂಪಸ್‌ನೊಳಗಿನ ಘಟಕ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ದಾಖಲಾತಿಯನ್ನು ವಿಧಾನಸಭೆ ಸ್ಪೀಕರ್ ಅವರ ಭರವಸೆ ಮೇರೆಗೆ ಆರಂಭಿಸಲಾಗಿದೆ ಎಂದು ಡಾ. ಧರ್ಮ ಸುದ್ದಿಗೋಷ್ಟಿಯಲ್ಲಿ ಕೇಳಿದ ಪ್ರಶ್ನೆಗೆ ಮಾಹಿತಿ ನೀಡಿದರು.
ಘಟಕ ಕಾಲೇಜು ಮುಚ್ಚುವ ಬಗ್ಗೆ ವಿವಿಯಿಂದ ಹೇಳಿದ್ದಿಲ್ಲ. ಆದರೆ ಸರಕಾರದಿಂದ ಅನುಮತಿಯೇ ಇಲ್ಲದೆ, ಅನುದಾನವೂ ಇಲ್ಲದೇ ಇದ್ದರೆ ಈ ಕಾಲೇಜುಗಳನ್ನು ನಡೆಸುವುದು ಅಸಾಧ್ಯ. ಈ ಹಿಂದೆ ಅನುಮತಿಯ ಭರವಸೆಯೊಂದಿಗೆ ಅದನ್ನು ನಡೆಸಲಾಗುತ್ತಿತ್ತಾದರೂ ಮುಂದೆ ನಡೆಸುವುದು ಸಾಧ್ಯವಿಲ್ಲ ಎನ್ನುವ ಬಗ್ಗೆ ಈ ಸಲ ದಾಖಲಾತಿ ಆರಂಭದಲ್ಲಿ ವಿವಿಯಿಂದ ಪ್ರಸ್ತಾವನೆ ಹೊರಡಿಸಲಾಗಿತ್ತು ಎಂದು ಸುದ್ದಿಗಾರರ ಪ್ರಶ್ನೆಗೆ ಡಾ. ಧರ್ಮ ಸ್ಪಷ್ಟನೆ ನೀಡಿದರು.
ಹಗರಣಗಳ ಬಗ್ಗೆಯೂ ತನಿಖೆ
ಮಂಗಳೂರು ವಿವಿಯಲ್ಲಿ ಕೇಳಿಬಂದ ಹಲವು ಹಗರಣಗಳ ಕುರಿತಾಗಿ ಕೇಳಿದ ಪ್ರಶ್ನೆಗೆ, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಸರಕಾರಿ ದಾಖಲೆಗಳನ್ನು ಪಡೆದು ಬೆಂಗಳೂರಿನ ಕೇಂದ್ರ ಮಟ್ಟದಲ್ಲಿ ತನಿಖೆ ನಡೆಯುತ್ತಿದ್ದು ಅದರ ಬಗ್ಗೆ ನಾವು ಪ್ರತಿಕ್ರಿಯೆ ನೀಡಲಾಗದು. ಹಿಂದಿನ ಉಪ ಕುಲಪತಿಗಳ ಅವಧಿಯಲ್ಲಿ ಆಗಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆ ಮಾಡುವ ಅಧಿಕಾರ ವಿವಿಗೆ ಇರುವುದಿಲ್ಲ. ಸಿಂಡಿಕೇಟ್ ಮೂಲಕ ಸರಕಾರಕ್ಕೆ ಪತ್ರ ಬರೆಯುವ ಅವಕಾಶ ಇದ್ದು ಅದನ್ನು ಮಾಡಿದ್ದೇವೆ ಎಂದುತ್ತರಿಸಿದರು.
Stating that Mangalore University is facing a severe financial crisis, its Vice-Chancellor P.L. Dharma said here on Friday, June 14, that four constituent colleges of the university which have been functioning for some time now have turned out to be “unauthorised” ones without the approval of the government.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm