BJP protest, Ullal, Mangalore, police: ತೊಕ್ಕೊಟ್ಟಿನಲ್ಲಿ ಬಿಜೆಪಿ ಪ್ರತಿಭಟನೆ ; ಯುವಮೋರ್ಚಾ ಅಧ್ಯಕ್ಷನ ಕೊರಳ ಪಟ್ಟಿ ಹಿಡಿದು ಎಳೆದಾಡಿದ ಉಳ್ಳಾಲ ಇನ್ಸ್ ಪೆಕ್ಟರ್, ಪೊಲೀಸರು - ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ 

20-06-24 01:26 pm       Mangalore Correspondent   ಕರಾವಳಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದ್ದು ತೊಕ್ಕೊಟ್ಟಿನಲ್ಲಿ ರಸ್ತೆ ತಡೆದು ಪ್ರತಿಭಟಿಸಲು ಮುಂದಾದ ಬಿಜೆಪಿ ಮಂಗಳೂರು ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ಅವರ ಕೊರಳ ಪಟ್ಟಿ ಹಿಡಿದು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ಎಳೆದಾಡಿದ ಪ್ರಸಂಗ ನಡೆದಿದ್ದು ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ಉಳ್ಳಾಲ, ಜೂ.20: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದ್ದು ತೊಕ್ಕೊಟ್ಟಿನಲ್ಲಿ ರಸ್ತೆ ತಡೆದು ಪ್ರತಿಭಟಿಸಲು ಮುಂದಾದ ಬಿಜೆಪಿ ಮಂಗಳೂರು ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ಅವರ ಕೊರಳ ಪಟ್ಟಿ ಹಿಡಿದು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ಎಳೆದಾಡಿದ ಪ್ರಸಂಗ ನಡೆದಿದ್ದು ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ರಾಜ್ಯ ಕಾಂಗ್ರೆಸ್ ಸರಕಾರದ ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆ ನೀತಿಯ ವಿರುದ್ಧ ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ನಡೆದ ರಸ್ತೆ ತಡೆ ಪ್ರತಿಭಟನೆಯಲ್ಲಿ ಇನ್ಸ್ ಪೆಕ್ಟರ್ ಬಾಲಕೃಷ್ಣ ಮತ್ತು ಬಿಜೆಪಿ ಮಂಗಳೂರು ಮಂಡಲದ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ನಡುವೆ ಘರ್ಷಣೆ ನಡೆದಿದೆ. ತೊಕ್ಕೊಟ್ಟು ಫ್ಲೈ ಓವರ್ ಕೆಳಗಡೆ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಬಿಜೆಪಿ ಜಿಲ್ಲಾ ನಾಯಕರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ದಿನೇಶ್ ಅಮ್ಟೂರು, ಮಹೇಶ್ ಜೋಗಿ ಸೇರಿದಂತೆ ಮಂಗಳೂರು ಮಂಡಲದ ಮುಖಂಡರು ರಾಜ್ಯ ಸರಕಾರದ ಬೆಲೆಯೇರಿಕೆ ನೀತಿಯ ವಿರುದ್ಧ ಖಂಡನಾ ಭಾಷಣ ಮಾಡಿದ್ದಾರೆ. 

ಬಳಿಕ ಸೇರಿದ್ದ ಬಿಜೆಪಿ ಕಾರ್ಯಕರ್ತರು ಸಾಂಕೇತಿಕವಾಗಿ ಹೆದ್ದಾರಿ ತಡೆಯಲು ಮುಂದಾದಾಗ ಸ್ಥಳದಲ್ಲಿ ಬಂದೋಬಸ್ತ್ ನಲ್ಲಿದ್ದ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರು ಮಂಡಲದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆಯವರ ಶರ್ಟ್ ಕೊರಳ ಪಟ್ಟಿಯನ್ನ ಹಿಡಿದು ಎಳೆದಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡ ಮುರಳಿಯವರು ಕೋಲಾರ್ ಪಟ್ಟಿ ಹಿಡಿದದ್ದು ಯಾಕೆಂದು ಇನ್ಸ್ ಪೆಕ್ಟರ್ ಅವರನ್ನ ಪ್ರಶ್ನಿಸಿದ್ದು, ಕೆಲ ಕಾಲ ಪೊಲೀಸರು, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಮಧ್ಯ ಪ್ರವೇಶಿಸಿದ ಮಂಗಳೂರು ದಕ್ಷಿಣ ಉಪ ವಿಭಾಗದ ಪ್ರಭಾರ ಎಸಿಪಿ ರವೀಶ್ ನಾಯ್ಕ್ ಅವರು ಬಿಜೆಪಿ ಪ್ರಮುಖರಲ್ಲಿ ಮಾತುಕತೆ ನಡೆಸಿ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದಿದ್ದಾರೆ.

ಪ್ರತಿಭಟನೆಗಳಲ್ಲಿ ಸಾಂಕೇತಿಕವಾಗಿ ರಸ್ತೆ ತಡೆ ನಡೆಯುವುದು ವಾಡಿಕೆಯಾಗಿದೆ. ಆದರೆ ಸಣ್ಣ ವಿಚಾರದಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಯುವಮೋರ್ಚಾ ಮುಖಂಡನ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದು ಘರ್ಷಣೆಗೆ ಕಾರಣವಾಯಿತು.

BJP protest against petrol diesel price, Ullal inspector Balakrishna holds collar of Yuvamorcha president for protesting, soon after which Bjp members and inspector had war of words.