Mangalore rain, Red Alert: ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ಬಿರುಗಾಳಿ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

20-06-24 11:01 pm       Mangalore Correspondent   ಕರಾವಳಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21ರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮಂಗಳೂರು, ಜೂನ್.20: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21ರಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಉದ್ದಕ್ಕೂ ಹಾಗೂ ಹೊರಗೆ ಚಂಡಮಾರುತ ರೀತಿಯ ವಾತಾವರಣ ಇರಲಿದೆ. ಗಾಳಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ತಿಳಿಸಿದೆ. 

ರಾಜ್ಯದ 10 ಜಿಲ್ಲೆಗಳಿಗೆ ಶನಿವಾರ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ನೀಡಲಾಗಿದೆ. ಭಾನುವಾರ 13 ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.

Coastal Karnataka is expected to witness isolated heavy to very heavy rainfall between June 20 and June 22, 2024, according to the India Meteorological Department (IMD). The IMD has issued a red alert for the region, indicating the likelihood of extremely heavy rainfall ranging from 64.5 mm to 204.4 mm over the specified period.