ಬ್ರೇಕಿಂಗ್ ನ್ಯೂಸ್
27-06-24 10:59 pm Mangalore Correspondent ಕರಾವಳಿ
ಉಳ್ಳಾಲ, ಜೂ.27: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಅಪಾಯಕ್ಕೀಡಾದ ಮನೆಯಲ್ಲಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಸ್ಥಳಾಂತರಿಸಿದ ಬೆನ್ನಲ್ಲೇ ಆ ಮನೆಯನ್ನ ಕಡಲಿನ ರಕ್ಕಸ ಅಲೆಗಳು ನುಂಗಿ ಹಾಕಿವೆ. ಮತ್ತೆ ಅಪಾಯ ಎದುರಿಸುತ್ತಿರುವ ಮೂರು ಮನೆಗಳ ಕುಟುಂಬ ಸದಸ್ಯರನ್ನ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.
ಮುನ್ನೂರು ಗ್ರಾಮದಲ್ಲಿ ಬುಧವಾರ ಸಂಭವಿಸಿದ್ದ ಘೋರ ದುರಂತದ ಹಿನ್ನೆಲೆಯಲ್ಲಿ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿಗಳಾದ ಮತ್ತಡಿ, ತಹಶೀಲ್ದಾರ್ ಪ್ರದೀಪ್ ಕೊರ್ಡೆಕರ್ ಸಹಿತ ಹಲವು ಅಧಿಕಾರಿಗಳು ಬಟ್ಟಪ್ಪಾಡಿಗೆ ತೆರಳಿ ಬೀಪಾತುಮ್ಮ ಅವರಲ್ಲಿ ಮನೆ ಸ್ಥಳಾಂತರಕ್ಕೆ ಸೂಚನೆ ನೀಡಿದ್ದರು. ಅಧಿಕಾರಿಗಳ ಸೂಚನೆ ಮೇರೆಗೆ ಬೀಪಾತುಮ್ಮ ಕುಟುಂಬವು ಸಂಬಂಧಿಕರ ಮನೆಗೆ ತೆರಳಿತ್ತು. ಮನೆಯವರು ತೆರಳಿದ ಮರು ದಿವಸವೇ ಅವರ ಮನೆ ಕಡಲು ಪಾಲಾಗಿದೆ.




ಕಳೆದ ವರುಷ ಇದೇ ಪ್ರದೇಶದಲ್ಲಿ ನೆಲೆಸಿದ್ದ ವೃದ್ಧೆ ರಾಜೀವಿ ಎಂಬವರ ಮನೆ ಕಡಲ್ಕೊರೆತಕ್ಕೆ ಕೊಚ್ಚಿ ಹೋಗಿತ್ತು. ಬೀಪಾತುಮ್ಮ ಅವರ ಮನೆಯ ಹಿಂಬದಿಯಲ್ಲೇ ಅಲಿಮಮ್ಮ , ನೆಬೀಸ, ಸೌಧ ಎಂಬವರ ಮೂರು ಮನೆಗಳಿದ್ದು ಅಪಾಯ ಎದುರಿಸುತ್ತಿವೆ. ಕೆಲವು ದಿನಗಳ ಹಿಂದೆ ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ನಡೆದ ಪ್ರಕೃತಿ ವಿಕೋಪ ತಡೆಯ ಮುಂಜಾಗ್ರತಾ ಸಭೆಯಲ್ಲಿ ಅಪಾಯದಂಚಿನಲ್ಲಿದ್ದ ಮನೆಗಳ ನಿವಾಸಿಗಳನ್ನು ಸ್ಥಳಾಂತರ ಮಾಡಲು ಅಧಿಕಾರಿಗಳಿಗೆ ಖಾದರ್ ಸೂಚನೆ ನೀಡಿದ್ದರು.
ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ ಪ್ರತಿಕ್ರಿಯಿಸಿ, ಅನಾಹುತ ಸಂಭವಿಸದಂತೆ ಸಂತ್ರಸ್ತರನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಬಾಡಿಗೆ ಮನೆಗಳ ವ್ಯವಸ್ಥೆ ಕಲ್ಪಿಸಲಾಗುವುದು. ಉಳ್ಳಾಲ ತಾಲೂಕು ಆಡಳಿತವು ಮನೆಗಳ ಬಾಡಿಗೆಗೆ 3,800 ರೂ. ಒದಗಿಸಿದರೆ ಉಳಿದ ಬಾಡಿಗೆ ಮೊತ್ತವನ್ನ ಸೋಮೇಶ್ವರ ಪುರಸಭೆಯಿಂದ ಭರಿಸಲಾಗುವುದು. ಪುರಸಭೆ ವ್ಯಾಪ್ತಿಯ ಸುರಕ್ಷಾ ನಗರದಲ್ಲಿ ಪುನರ್ವಸತಿಗಾಗಿ ನಿವೇಶನ ಮಂಜೂರಾಗಿದ್ದು ಜಮೀನನ್ನು ಸಮತಟ್ಟುಗೊಳಿಸಲಾಗಿದೆ. ಶೀಘ್ರದಲ್ಲೇ ಶಾಸಕರ ಅಧ್ಯಕ್ಷತೆಯಲ್ಲಿ ಆಶ್ರಯ ಸಮಿತಿ ಮಾಡಿ ಸಭೆ ನಡೆಸಿ ಸಂತ್ರಸ್ತರಿಗೆ ನಿವೇಶನ ಹಂಚುವ ಪ್ರಕ್ರಿಯೆ ನಡೆಯಲಿದೆ ಎಂದಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ
ಕಡಲ್ಕೊರೆತ ತೀವ್ರಗೊಂಡ ಬಟ್ಟಪ್ಪಾಡಿ ಪ್ರದೇಶಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ ನೀಡಿ ಸಂತ್ರಸ್ತರಲ್ಲಿ ಮಾತುಕತೆ ನಡೆಸಿದರು. ಕಡಲ್ಕೊರೆತ ಸಂತ್ರಸ್ತರು ಸಾಂಪ್ರದಾಯಿಕ ಮೀನುಗಾರಿಕೆ ನಡೆಸಿ ಬದುಕು ಕಟ್ಟಿಕೊಂಡಿದ್ದವರು. ಅವರಿಗೆ ತಕ್ಷಣಕ್ಕೆ ಪರ್ಯಾಯ ಮನೆಗಳನ್ನ ಸರಕಾರ ಒದಗಿಸಬೇಕು. ಅಲ್ಲದೆ, ಸ್ಥಳೀಯ ಪ್ರದೇಶದಲ್ಲೇ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡುವುದಾಗಿ ಹೇಳಿದರು.
Mangalore Uchila sea erosion, four family members of houses to be shifted, one house destroyed.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm