Kadaba, Mangalore News; ಕಡಬದಲ್ಲಿ 800 ವರ್ಷ ಹಳೆಯ ಶಿಲಾಶಾಸನ ಪತ್ತೆ ; ವಿಗ್ರಹವೆಂದು ಪೂಜಿಸುತ್ತಿದ್ದ ಸ್ಥಳೀಯರು, ತುಳು ರಾಜ್ಯ, ದೈವಾರಾಧನೆ ಬಗ್ಗೆ ಉಲ್ಲೇಖ 

02-07-24 02:58 pm       HK News Desk   ಕರಾವಳಿ

ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಪತ್ತೆಯಾಗಿದ್ದು ತುಳು ರಾಜ್ಯ, ದೈವಾರಾಧನೆ ಬಗ್ಗೆ ಉಲ್ಲೇಖ ಇದೆ.‌ 

ಪುತ್ತೂರು, ಜುಲೈ 2: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಪತ್ತೆಯಾಗಿದ್ದು ತುಳು ರಾಜ್ಯ, ದೈವಾರಾಧನೆ ಬಗ್ಗೆ ಉಲ್ಲೇಖ ಇದೆ.‌ 

ಶಿಲಾ ಶಾಸನವು ಸುಮಾರು 30 ಇಂಚು ಎತ್ತರ ಹಾಗೂ 16 ಇಂಚು ಅಗಲ, 4 ಇಂಚು ದಪ್ಪ ಇದೆ. ಶಾಸನದ 17 ಇಂಚು ಮೇಲೆ ಹೋದಂತೆ ಶಾಸನವು ಅರ್ಧ ಚಂದ್ರಾಕೃತಿ ಆಕಾರ ಪಡೆದಿದ್ದು, ಶಾಸನದ ಶಿರೋಭಾಗದ ಮಂಟಪದ ಮಧ್ಯದಲ್ಲಿ ಒಂದು ನವಿಲಿನ ಆಕೃತಿಯನ್ನು, ಅದರ ಬಲಭಾಗದಲ್ಲಿ ಸೂರ್ಯ ಹಾಗೂ ಸಣ್ಣ ದೀಪ, ಎಡ ಭಾಗದಲ್ಲಿ ಅರ್ಧಚಂದ್ರ ಹಾಗೂ ಸ್ವಲ್ಪ ದೊಡ್ಡದಾದ ಉರಿಯುತ್ತಿರುವ ದೀಪದ ಆಕೃತಿಯನ್ನು ಕೆತ್ತಲಾಗಿದೆ. 

News18

News18

ನೂರಾರು ವರ್ಷಗಳಿಂದ ಈ ಸ್ಥಳದಲ್ಲಿ ಪುಟ್ಟ ಗುಡಿ ಇದ್ದು, ಅದರ ಗರ್ಭಗುಡಿಯಲ್ಲಿರುವ ಪಾಣಿಪೀಠದ ಮಧ್ಯದಲ್ಲಿ ಶಿಲಾ ಶಾಸನದ ಮೇಲ್ಭಾಗ ಮಾತ್ರ ಕಾಣುತ್ತಿತ್ತು. ಇಲ್ಲಿನ ಸ್ಥಳೀಯರು ಶ್ರೀ ಸುಬ್ರಮಣ್ಯ ಸ್ವಾಮಿಯ ವಾಹನವಾದ ಮಯೂರ ರೂಪದಲ್ಲೇ ಸುಬ್ರಹ್ಮಣ್ಯನನ್ನು ಆವಾಹನೆ ಮಾಡಿ ಈ ಶಾಸನವನ್ನೇ ವಿಗ್ರಹವೆಂದು ತಿಳಿದು ಪೂಜಿಸುತ್ತಿದ್ದರು. 2024 ರಲ್ಲಿ ಈ ಗುಡಿಯನ್ನು ಜೀರ್ಣೋದ್ಧಾರ ಮಾಡುವ ಸಲುವಾಗಿ ವಿಗ್ರಹವನ್ನು ಬಾಲಾಲಯಕ್ಕೆ ಸ್ಥಳಾಂತರಿಸುವ ಸಮಯದಲ್ಲಿ ಮಯೂರ ರೂಪದಲ್ಲಿದ್ದ, ದೇವರ ವಿಗ್ರಹವೆಂದು ಭಾವಿಸಿದ ಈ ಶಿಲಾ ಕಲ್ಲನ್ನು ಮೇಲೆತ್ತುವಾಗ ಸುಮಾರು ಮೂರುವರೆ ಅಡಿ ಗಾತ್ರದ ಈ ಪುರಾತನ ಶಿಲಾಶಾಸನವು ಬೆಳಕಿಗೆ ಬಂದಿದೆ. ಇದು ಮೂರ್ತಿಯಲ್ಲ, ಶಾಸನ ಎಂದು ತಿಳಿದು ಬಳಿಕ ಬಾಲಾಲಯದ ಹೊರ ಗೋಡೆಗೆ ತಾಗಿಸಿ ಇಡಲಾಗಿದೆ. ಪ್ರಸ್ತುತ ಈ ಶಾಸನಕ್ಕೆ ಪೂಜೆ ಪುರಸ್ಕಾರಗಳು ನಡೆಯುತ್ತಿಲ್ಲ. 

ಶಾಸನದಲ್ಲಿ ಸುಮಾರು 15 ಸಾಲುಗಳಿದ್ದು ಕನ್ನಡ ಲಿಪಿಯಲ್ಲಿ ಶಾಸನವನ್ನು ಕೆತ್ತಲಾಗಿದೆ. ಲಿಪಿ ಸ್ಪಷ್ಟವಾಗಿ ಗೋಚರಿಸುತ್ತಿಲ್ಲ. ಸ್ವಸ್ತಿ ಶ್ರೀ ಎಂದು ಪ್ರಾರಂಭವಾಗುವ ಈ ಶಾಸನದಲ್ಲಿ ನೀರು ಲಭ್ಯವಾಗಲು ಮಹಾಯಾಗವನ್ನು ನಡೆಸಿದ ಉಲ್ಲೇಖವಿದೆ. ಹಾಗೂ ಕುಕ್ಕೆಯ ದೈವಗಳು ಎಂಬ ಪದದ ಉಲ್ಲೇಖವಿದೆ. ಮಾತ್ರವಲ್ಲದೆ, ಶಾಸನದಲ್ಲಿ ‘ತುಳು ರಾಜ್ಯ’ ಎಂಬ ಪದದ ಪ್ರಯೋಗವಾಗಿದ್ದು, ಇದು ತುಳುನಾಡಿನ ಭವ್ಯ ಪರಂಪರೆಯನ್ನು ಪುಷ್ಟೀಕರಿಸುವ ಮಹತ್ವದ ದಾಖಲೆ ಎನ್ನಬಹುದು.

ಶಿಲಾ ಶಾಸನವು ವಿಜಯನಗರ ಸಾಮ್ರಾಜ್ಯ ಕಾಲಕ್ಕೆ ಸಂಬಂಧಿಸಿದ್ದು ಎನ್ನಲಾಗುತ್ತಿದ್ದು, 800 ವರ್ಷ ಹಳೆಯದಾಗಿದೆ. ಕ್ಷೇತ್ರದ ಬಗ್ಗೆ ಆಳವಾದ ಅಧ್ಯಯನ ನಡೆಸಿದರೆ ಇನ್ನೂ ಅನೇಕ ಐತಿಹಾಸಿಕ ವಿಚಾರಗಳು ಬೆಳಕಿಗೆ ಬರಬಹುದು ಎಂದು ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ನಡೆಸಲ್ಪಡುವ “ಶಾಸನ -ಶೋಧನ- ಅಧ್ಯಯನ- ಸಂರಕ್ಷಣಾ” ಯೋಜನೆಯ ಪ್ರಮುಖ ಅಧ್ಯಯನಕಾರ ಇತಿಹಾಸ ತಜ್ಞರಾದ ಡಾ. ಉಮಾನಾಥ ಶೆಣೈ ವೈ ಅಭಿಪ್ರಾಯ ಪಟ್ಟಿದ್ದಾರೆ.

This rock inscription is about 30 inches high by 16 inches wide and 4 inches thick. The main text of the inscription measures 14 inches in width and 17 inches in height, and the letters are engraved half an inch into the stone, giving a square relief strip on the outer side and making the inner side flat. The bottom of the inscription i.e. the part buried in the earth is 15 inches.