Mangalore rain, balmatta landslide, MCC: ದುರಂತ ಬಳಿಕ ಎಚ್ಚೆತ್ತ ಮಹಾನಗರ ಪಾಲಿಕೆ ; ಮಳೆಗಾಲ ಮುಗಿಯೋ ವರೆಗೂ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಸೂಚನೆ

03-07-24 10:52 pm       Mangalore Correspondent   ಕರಾವಳಿ

ನಿರಂತರ ಮಳೆಯಿಂದ ಅನಾಹುತ ತಪ್ಪಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯೋ ವರೆಗೂ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಆದೇಶ ಮಾಡಿದೆ.

ಮಂಗಳೂರು, ಜುಲೈ 3: ನಿರಂತರ ಮಳೆಯಿಂದ ಅನಾಹುತ ತಪ್ಪಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯೋ ವರೆಗೂ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಆದೇಶ ಮಾಡಿದೆ.

ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗುತ್ತಿದ್ದು ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆಯ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡುಬಂದಲ್ಲಿ ನಿಪತ್ತು ನಿರ್ವಹಣಾ ಕಾಯ್ದೆಯಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಮಧ್ಯದ ಬಲ್ಮಠದಲ್ಲಿ ಕಟ್ಟಡದ ತಳಪಾಯ ಕಾಮಗಾರಿ ನಡೆಸುತ್ತಿರುವಾಗಲೇ ಪಕ್ಕದ ಧರೆ ಕುಸಿದು ಇಬ್ಬರು ಕಾರ್ಮಿಕರು ಸಿಲುಕಿದ್ದಲ್ಲದೆ, ಆ ಪೈಕಿ ಒಬ್ಬ ಕಾರ್ಮಿಕ ದುರಂತ ಸಾವಿಗೀಡಾದ ದುರಂತ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಕಟ್ಟಡ ಕಾಮಗಾರಿ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ.

Mangalore rain, balmatta landslide one dead, Mangalore city corporation orders to stop  construction of buildings in city till rain stops after the death of labourer in balmatta under construction site.