ಬ್ರೇಕಿಂಗ್ ನ್ಯೂಸ್
07-07-24 06:27 pm Mangalore Correspondent ಕರಾವಳಿ
ಮಂಗಳೂರು, ಜು.6: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಪ್ರವಾಸಿಗರನ್ನು ಸರ್ವ ಋತುವಿನಲ್ಲೂ ಆಕರ್ಷಿಸಲು ಜಿಲ್ಲೆಯಲ್ಲಿ ನಡೆಯುವ ಪ್ರಮುಖ ಉತ್ಸವ, ಹಬ್ಬಗಳ ಮಾಹಿತಿಗಳನ್ನೊಳಗೊಂಡ ಈವೆಂಟ್ ಕ್ಯಾಲೆಂಡರನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬಿಡುಗಡೆಗೊಳಿಸಿದರು.
ಕೋಸ್ಟಲ್ ಕರ್ನಾಟಕ ಟೂರಿಸಂ ಡೆವಲಪ್ ಮೆಂಟ್ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು ಈವೆಂಟ್ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಗೆ ಇದು ಮೊದಲ ಹೆಜ್ಜೆಯಾಗಿದ್ದು ಗೋವಾ ಕೇರಳದಂತೆ ಇಲ್ಲಿಯೂ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶವಿದೆ ಎಂದು ಸಚಿವ ಗುಂಡೂರಾವ್ ಹೇಳಿದರು.
ವೆಬ್ ಪೋರ್ಟಲ್ ಮೂಲಕ ಮಂಗಳೂರಿನ ಪ್ರವಾಸೋದ್ಯಮವನ್ನು ವಿಭಿನ್ನವಾಗಿ ತೋರಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದೇ ಇದ್ದಾಗ ಪ್ರವಾಸೋದ್ಯಮ ಬೆಳವಣಿಗೆ ಹೊಂದುತ್ತದೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಈ ನಿಟ್ಟಿನಲ್ಲಿ ಖಾಸಗಿ ಹೂಡಿಕೆಗಳಿಗೂ ಸರಕಾರ ಪೂರಕವಾಗಿ ಸ್ಪಂದಿಸಲಿದೆ ಎಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ವೆಬ್ ಪೋರ್ಟಲ್ ಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಇದೊಂದು ಉತ್ತಮ ಹೆಜ್ಜೆಯಾಗಿದೆ. ಈ ಮೂಲಕ ಹೊರಜಗತ್ತಿಗೆ ಜಿಲ್ಲೆಯ ಸಂಸ್ಕೃತಿ, ವೈವಿಧ್ಯಮಯ ಚಟುವಟಿಕೆಗಳನ್ನು ಪರಿಚಯಿಸಲು ಸಹಕಾರಿಯಾಗಲಿದೆ. ಕೇಂದ್ರ ಸರಕಾರದಿಂದಲೂ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರಯತ್ನಿಸುವುದಾಗಿ ಹೇಳಿದರು.
ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಇದರಲ್ಲಿ ಸ್ಥಳಿಯ ಉದ್ಯಮಿಗಳು, ಪ್ರವಾಸೋದ್ಯಮ ತಜ್ಞರು, ವಿವಿಧ ಕ್ಷೇತ್ರಗಳ ಅನುಭವಿಗಳು ಇರಲಿದ್ದಾರೆ. ಇಲ್ಲಿನ ನೈಸರ್ಗಿಕ ಸೌಂದರ್ಯ, ಸಾಂಸ್ಕೃತಿಕ ಪರಂಪರೆಯನ್ನು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಜೋಡಿಸಲಾಗುವುದು. ಈವೆಂಟ್ ಕ್ಯಾಲೆಂಡರ್ ಜಿಲ್ಲೆಯ ಆಕರ್ಷಣೀಯ ಉತ್ಸವ ಹಾಗೂ ಕಾರ್ಯಕ್ರಮಗಳ ಮಾಹಿತಿ ಒಳಗೊಂಡಿದೆ. ಜಿಲ್ಲೆಯಲ್ಲಿ ವರ್ಷವಿಡೀ ಆಯೋಜಿಸುವ ಸಾಂಸ್ಕೃತಿಕ, ಸಾಹಸ, ಪರಿಸರ, ಧಾರ್ಮಿಕ ಕಾರ್ಯಕ್ರಮಗಳ ನಿಖರವಾದ ಮಾಹಿತಿ ಒಳಗೊಂಡಿದೆ. ಇದರಿಂದ ಇಡೀ ವರ್ಷ ಪ್ರವಾಸಿಗರನ್ನು ಜಿಲ್ಲೆಯತ್ತ ಆಕರ್ಷಿಸಬಹುದು ಎಂದು ಹೇಳಿದರು.ಸಮಾರಂಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಪ್ರವಾಸೋದ್ಯಮ ಉಪನಿರ್ದೇಶಕ ಮಾಣಿಕ್ಯ, ಗೌರವ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
Dakshina Kannada district in-charge Minister Dinesh Gundu Rao has said the tourism calendar is a major step towards the development of the sector in the district.Speaking after releasing the calendar at a programme organised by the Coastal Karnataka Tourism Development Council here on Friday, Mr. Rao noted the calendar contains details of various events to be conducted throughout the year. He said the tourism sector has great potential in the region on the lines of Kerala and Goa.
24-11-24 08:39 pm
Bangalore Correspondent
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
Karnataka Bypolls Live Updates Congress: ಉಪ ಚ...
23-11-24 11:35 am
ಲಾರಿ ಡ್ರೈವರ್ ಎಡವಟ್ಟಿಗೆ ಫಾರ್ಚುನರ್ ಕಾರು ಡಿಕ್ಕ...
22-11-24 05:16 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
24-11-24 09:13 pm
Mangalore Correspondent
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
Naxal Vikram Gowda, Murdeshwar, Mangalore: ಪೊ...
24-11-24 03:21 pm
Mangalore, Someshwara Suicide; ಸೋಮೇಶ್ವರ ರುದ್ರ...
24-11-24 01:18 pm
MP Captian Brijesh Chowta, Mangalore: ಐಬಿಆರ್...
23-11-24 10:37 pm
24-11-24 04:33 pm
Bangalore Correspondent
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm
Bangalore crime, Stabbing: ಬೈಕ್ ಪಾರ್ಕಿಂಗ್ ವಿಚ...
22-11-24 04:14 pm