ಬ್ರೇಕಿಂಗ್ ನ್ಯೂಸ್
08-07-24 04:39 pm Mangalore Correspondent ಕರಾವಳಿ
ಪುತ್ತೂರು, ಜುಲೈ 8: ಬೆಂಗಳೂರಿನ ವ್ಯಕ್ತಿಯೊಬ್ಬರು ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು ನದಿಯಲ್ಲಿ ಕೊಚ್ಚಿ ಹೋಗಿದ್ದಾತನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಬೆಂಗಳೂರಿನ ಮಾರತಹಳ್ಳಿ ನಿವಾಸಿ ರವಿಕುಮಾರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ತನ್ನ ಕೈಯನ್ನು ಕೊಯ್ದುಕೊಂಡು ಕೋಡಿಂಬಾಳದಲ್ಲಿ ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ರವಿಕುಮಾರ್ ಕೊಚ್ಚಿಕೊಂಡು ಹೋಗಿದ್ದು, ಬಳಿಕ ನದಿಯ ಮಧ್ಯಭಾಗದ ಪೊದೆಯಲ್ಲಿ ಸಿಲುಕಿಕೊಂಡಿದ್ದ. ನದಿಯ ಮಧ್ಯೆ ಸಿಲುಕುತ್ತಿದ್ದಂತೆ ಜೀವ ಭಯ ಕಾಡಿದ್ದು ತನ್ನನ್ನು ರಕ್ಷಣೆ ಮಾಡುವಂತೆ ಅಂಗಲಾಚಿದ್ದಾನೆ. ಕಿರುಚಾಟ ಕೇಳಿಸಿಕೊಂಡ ಸ್ಧಳೀಯರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನದಿ ತುಂಬಿಕೊಂಡು ಹರಿಯುತ್ತಿದ್ದು ಈತನ ಅದೃಷ್ಟದಿಂದ ಪೊದೆಯಲ್ಲಿ ಸಿಲುಕಿ ಬದುಕುಳಿದಿದ್ದಾನೆ.
ಸ್ಥಳಕ್ಕೆ ಆಗಮಿಸಿದ ಪೋಲಿಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಶೌರ್ಯ ತಂಡದ ಸದಸ್ಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ನದಿ ಮಧ್ಯದಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಿ ಮೇಲಕ್ಕೆ ತಂದಿದ್ದಾರೆ. ನದಿಗೆ ಹಾರಿದ ಸ್ಥಳದಲ್ಲಿ ಆ ವ್ಯಕ್ತಿಯ ಬ್ಯಾಗ್ ಮತ್ತು ಪ್ಯಾಂಟಿನ ಜೇಬಿನಲ್ಲಿ ಹಣ ಪತ್ತೆಯಾಗಿದೆ. ಪೊಲೀಸರು ವ್ಯಕ್ತಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Fire service personnel rescued a youth who was stuck in the Kumaradhara river and calling for help at Pulikukku on Monday July 8. The Kumaradhara river was flowing at full capacity at Pulikukku. A youth was found crying for help, clinging to the bushes in the river on Monday morning. Locals alerted the police and fire service personnel.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm