Mangalore udupi rain, School Holiday; ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಸೂಚನೆ ; ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ 

08-07-24 08:53 pm       Mangaluru Correspondent   ಕರಾವಳಿ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಬಗ್ಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜುಲೈ 9ರಂದು ರಜೆ ನೀಡಲಾಗಿದೆ. 

ಮಂಗಳೂರು, ಜುಲೈ 8: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಬಗ್ಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜುಲೈ 9ರಂದು ರಜೆ ನೀಡಲಾಗಿದೆ. 

ಇದಲ್ಲದೆ, ಮಳೆ ವಿಕೋಪದ ಬಗ್ಗೆ ಮಾಹಿತಿ ಇದ್ದಲ್ಲಿ ಕೂಡಲೇ ಸ್ಥಳೀಯ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ಅಲ್ಲದೆ, ಶಾಲೆಗಳ ಕಟ್ಟಡ ಕುಸಿಯುವ ಸಾಧ್ಯತೆ ಅಥವಾ ನಾದುರಸ್ತಿಯಲ್ಲಿರುವುದು ಇದ್ದರೆ ಅಂತಹ ಕಟ್ಟಡಗಳ ಬಗ್ಗೆ ಶಾಲಾಡಳಿತ ಸಮಿತಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. 

ಸೋಮವಾರ ಇಡೀ ದಿನ ಮಳೆಯಾಗಿದ್ದು ಉಡುಪಿ ನಗರ ಭಾಗದಲ್ಲಿ ಹಲವು ಕಡೆ ಕೃತಕ ನೆರೆ ಸೃಷ್ಟಿಯಾಗಿದೆ. ನದಿಗಳು ಭೋರ್ಗರೆದು ಹರಿಯುತ್ತಿದ್ದು ನೀರಿನ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ನದಿಗಳು, ಸಮುದ್ರ ಕಡೆಗೆ ಸಾರ್ವಜನಿಕರು ತೆರಳಬಾರದು ಎನ್ನುವ ಸೂಚನೆಯನ್ನೂ ನೀಡಲಾಗಿದೆ.‌

ಹವಾಮಾನ ಇಲಾಖೆಯಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ.

Mangalore and udupi heavy raind, school and college declared Holiday on July 9th for red alert. The India Meteorological Department (IMD) has issued a red alert for the coastal region as heavy rains continue to affect Udupi, Dakshina Kannada, and Uttara Kannada districts. The precautionary holiday for anganwadi centers, primary and high schools, and PUCs is aimed at ensuring safety amid the ongoing inclement weather.