ಬ್ರೇಕಿಂಗ್ ನ್ಯೂಸ್
10-07-24 06:52 pm Mangalore Correspondent ಕರಾವಳಿ
ಮಂಗಳೂರು, ಜುಲೈ 10: ಮಂಗಳೂರಿನ ಶ್ರೀನಿವಾಸ್ ಕಾಲೇಜಿನಲ್ಲಿ ಬಿಸಿಎ ಕಲಿಯುತ್ತಿದ್ದ ಕಾಸರಗೋಡು ಮೂಲದ ಹಿಂದು ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ್ದು, ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಈ ಬಗ್ಗೆ ಯುವತಿ ಪೋಷಕರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಕಾಸರಗೋಡಿನ ವಿದ್ಯಾನಗರ ನಿವಾಸಿ ಮಹಮ್ಮದ್ ಅಶ್ಫಾಕ್ ಎಂಬಾತ ಪ್ರಕರಣದ ಆರೋಪಿಯಾಗಿದ್ದು, ಜೂನ್ 30ರಂದು ಯುವತಿಯನ್ನು ಉಳ್ಳಾಲದಿಂದ ಕಿಡ್ನಾಪ್ ಮಾಡಿದ್ದಾಗಿ ದೂರಿನಲ್ಲಿ ಹೆತ್ತವರು ತಿಳಿಸಿದ್ದಾರೆ. ಯುವತಿ ಉಳ್ಳಾಲದ ಸಂಬಂಧಿಕರ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದಳು. ಅಲ್ಲಿಂದಲೇ ಅಪಹರಿಸಿಕೊಂಡು ಕೇರಳದ ಕೊಚ್ಚಿಗೆ ಒಯ್ದಿದ್ದು ಅಲ್ಲಿ ಇಸ್ಲಾಮಿಗೆ ಮತಾಂತರ ಮಾಡುವ ಉದ್ದೇಶ ಹೊಂದಿದ್ದಾನೆ ಎಂದು ದೂರಿನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ತನಿಖೆ ಎತ್ತಿಕೊಂಡ ಪಾಂಡೇಶ್ವರ ಪೊಲೀಸರು ಆರೋಪಿ ಮಹಮ್ಮದ್ ಅಶ್ಫಾಕ್ ಮತ್ತು ಯುವತಿಯನ್ನು ಕಾಸರಗೋಡಿನಲ್ಲಿ ಪತ್ತೆ ಮಾಡಿದ್ದಾರೆ. ಅದೇ ಯುವಕನನ್ನು ಮದುವೆಯಾಗುತ್ತೇನೆಂದು ಹೇಳುತ್ತಿದ್ದ ಯುವತಿಯನ್ನು ಪೊಲೀಸರು ಮಂಗಳೂರಿಗೆ ಕರೆತಂದಿದ್ದು, ಮುಡಿಪುವಿನ ಪ್ರಜ್ಞಾ ಸಲಹಾ ಕೇಂದ್ರದಲ್ಲಿ ಹಾಕಿದ್ದಾರೆ. ತನ್ನ ಸ್ವಇಚ್ಛೆಯಿಂದ ಹೋಗಿದ್ದಾಗಿ ಯುವತಿ ಹೇಳಿದ್ದರಿಂದ ಪೊಲೀಸರು ಆರೋಪಿ ಅಶ್ಫಾಕ್ ನನ್ನು ಬಂಧನ ಮಾಡದೇ ಬಿಟ್ಟು ಬಂದಿದ್ದಾರೆ. ಅಕ್ರಮವಾಗಿ ಯುವತಿಯನ್ನು ಹಿಡಿದಿಟ್ಟಿದ್ದರೂ, ಎಫ್ಐಆರ್ ದಾಖಲಾಗಿದ್ದರೂ ಆರೋಪಿ ಬಂಧನ ಮಾಡದಿರುವುದಕ್ಕೆ ಬಜರಂಗದಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಪಿ ಮಹಮ್ಮದ್ ಅಶ್ಫಾಕ್ ನಟೋರಿಯಸ್ ಕ್ರಿಮಿನಲ್ ಹಿನ್ನೆಲೆಯವನಾಗಿದ್ದು, ಆತನ ಮೇಲೆ ಕಾಸರಗೋಡು ನಗರದ ವಿವಿಧ ಠಾಣೆಗಳಲ್ಲಿ 15 ಕೇಸು ದಾಖಲಾಗಿದೆ. ಈ ಪೈಕಿ ನಾಲ್ಕರಲ್ಲಿ ಖುಲಾಸೆಯಾಗಿದ್ದರೆ, ಮೂರು ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗಿದೆ. ಹೆಚ್ಚಿನ ಪ್ರಕರಣಗಳು ಗಲಾಟೆ, ದೊಂಬಿ, ಹಲ್ಲೆ, ಕೊಲೆಯತ್ನ ಆರೋಪದವುಗಳು. ಕೋರ್ಟಿನಿಂದ ಶಿಕ್ಷೆಯಾಗಿದ್ದರಿಂದ ಜಾಮೀನು ಮೇಲೆ ಹೊರ ಬಂದಿರುವ ವ್ಯಕ್ತಿಯಂತೆ ತೋರುತ್ತಿದ್ದಾನೆ ಎಂದು ಅಶ್ಫಾಕ್ ಮೇಲಿನ ಕೇಸುಗಳ ದಾಖಲೆ ಸಹಿತ ಬಜರಂಗದಳ ನಾಯಕರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದು ಲವ್ ಜಿಹಾದ್ ಉದ್ದೇಶದ ಆರೋಪಿಯ ಕೃತ್ಯದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ, ಆರೋಪಿಗೆ ಈ ಹಿಂದೆಯೇ ಮದುವೆಯಾಗಿದ್ದು, 2013ರಿಂದಲೇ ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
Mangalore Love hijad alleged, parents file kidnap case at pandeshwar police station. Kasaragod native Mohammad Aswak is the guy with whom Mangalore based girl has gone with. Police have succeeded in getting the girl back to Mangalore.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm