ಬ್ರೇಕಿಂಗ್ ನ್ಯೂಸ್
12-07-24 06:09 pm Mangalore Correspondent ಕರಾವಳಿ
ಮಂಗಳೂರು, ಜುಲೈ.12: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿ ನವೀಕರಿಸಲಾದ ಸಂಸದರ ಕಚೇರಿಯನ್ನು ಆರೆಸ್ಸೆಸ್ ಹಿರಿಯ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಿ ಶುಭ ಕೋರಿದರು.
ಇದೇ ವೇಳೆ, ಮಾತನಾಡಿದ ಕಲ್ಲಡ್ಕ ಭಟ್, ಹಿಂದುತ್ವ ಮತ್ತು ದೈವ ದೇವರ ಆರಾಧನಾ ಕ್ಷೇತ್ರದಲ್ಲಿ ದೇವರ ಮತ್ತು ಜನರ ಆಶೀರ್ವಾದದಿಂದ ನಮ್ಮ ಕ್ಷೇತ್ರಕ್ಕೆ ಒಬ್ಬ ಕ್ಯಾಪ್ಟನ್, ಯೋಧ ಜನಪ್ರತಿನಿಧಿಯಾಗಿ ಲಭಿಸಿದ್ದು ಸಂಸತ್ತಿಗೆ ಹೋಗಿದ್ದಾರೆ. ಸೇನೆಯಲ್ಲಿ ಯೋಧ ದೇಶಕ್ಕಾಗಿ ಕೆಲಸ ಮಾಡುತ್ತಾನೆ. ಅದೇ ರೀತಿ ಬ್ರಿಜೇಶ್ ಚೌಟರು ಈ ಜಿಲ್ಲೆಯ ಅಭಿವೃದ್ಧಿಗಾಗಿ ಯೋಧನಂತೆ ಕೆಲಸ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಲಿದ್ದಾರೆಂಬ ವಿಶ್ವಾಸ ಇದೆ. ಸಂಸದರ ಕಚೇರಿ ಅಂದರೆ, ಇದು ಕುಳಿತುಕೊಳ್ಳಲು ಇರುವ ಜಾಗ ಅಲ್ಲ. ಸಮಸ್ಯೆ ಹೇಳಿಕೊಂಡು ಬರುವ ಜನರ ಅಹವಾಲು ಆಲಿಸಲು ಇರುವ ಕಚೇರಿ. ಯೋಧನ ರೀತಿ ಇಲ್ಲಿ ತಮ್ಮನ್ನು ಸಮರ್ಪಣೆ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
ನೂತನ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ನೂತನ ಕಚೇರಿಯು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಜನರ ಸಮಸ್ಯೆಗಳಿಗೆ ಉತ್ತರವಾಗುವ ಕೇಂದ್ರವಾಗಲಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ಕೊಡಿಸುವ ಕೆಲಸ, ಜವಾಬ್ದಾರಿಯನ್ನು ಮಾಡುತ್ತೇನೆ. ಪ್ರಧಾನಿಯವರ ವಿಕಸಿತ ಭಾರತದ ಕಲ್ಪನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯನ್ನು ರೂಪಿಸುವ ಉದ್ದೇಶ ಹೊಂದಿದ್ದೇನೆ ಎಂದು ಹೇಳಿದರು.
ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ಕೃಷ್ಣ ಪಾಲೆಮಾರ್, ಮಾಜಿ ಸಂಸದ ನಳಿನ್ ಕುಮಾರ್ ಸೇರಿದಂತೆ ಹಿರಿ- ಕಿರಿಯ ಕಾರ್ಯಕರ್ತರು, ಪ್ರಮುಖರು ಉಪಸ್ಥಿತರಿದ್ದರು.
Senior RSS leader Kalladka Prabhakar Bhat inaugurated the renovated MP's office on the second floor of the deputy commissioner's office of Dakshina Kannada MP Captain Brijesh Chowta and greeted him.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm