ಬ್ರೇಕಿಂಗ್ ನ್ಯೂಸ್
12-07-24 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.12: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಯೋಜನೆಗಳ ಅಭಿವೃದ್ಧಿ ದೃಷ್ಟಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿ ಮೇರೆಗೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಜುಲೈ 17 ರಂದು ಮಂಗಳೂರಿಗೆ ಆಗಮಿಸಿ ರೈಲ್ವೇ ಅಧಿಕಾರಿಗಳ ಜೊತೆಗೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಬೆಳಿಗ್ಗೆ 9ರಿಂದ 9.45ರ ನಡುವೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣೆ, 10ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11 ರಿಂದ ಮಧ್ಯಾಹ್ನ 2ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.
ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೇ ಮತ್ತು ಭಾರತೀಯ ರೈಲ್ವೇ ವಿಲೀನ, ಈ ವಿಲೀನದಿಂದ ರೈಲ್ವೇ ಮೂಲ ಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.
ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ಉನ್ನತೀಕರಣ
ಶಿರಾಡಿ ಘಾಟ್ ಭಾಗದ ಕಾರ್ಯ ಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ- ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.
ಸಭೆಯು ದಕ್ಷಿಣ ಕನ್ನಡದ ರೈಲ್ವೇ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Union Minister of State for Railways V. Somanna will hold a meeting in Mangaluru on July 17 to discuss and address railway issues pertaining to Mangaluru region, according to Dakshina Kannada Member of Parliament Captain Brijesh Chowta.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm