ಬ್ರೇಕಿಂಗ್ ನ್ಯೂಸ್
13-07-24 03:47 pm Mangalore Correspondent ಕರಾವಳಿ
ಮಂಗಳೂರು, ಜುಲೈ.13: ಬಾಲ್ಯ ವಿವಾಹ ಪ್ರಕರಣಗಳಲ್ಲಿ ನಮ್ಮ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂಬುದು ನಾವೆಲ್ಲ ತಲೆತಗ್ಗಿಸುವ ವಿಚಾರ. ಜವಾಬ್ದಾರಿ ಸ್ಥಾನದ ಮಹಿಳಾ ಮಂತ್ರಿಯಾಗಿ ನನಗೆ ತಲೆತಗ್ಗಿಸುವ ಸ್ಥಿತಿಯಾಗಿದೆ. ಅದರಲ್ಲೂ ನನ್ನ ಜಿಲ್ಲೆ ಬೆಳಗಾವಿ ಬಾಲ್ಯ ವಿವಾಹದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಹೇಳಲು ಬಹಳಷ್ಟು ನಾಚಿಕೆ ಆಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಇದೊಂದು ದುರದೃಷ್ಟಕರ ಸಂಗತಿ. ಆದರೆ ಇದನ್ನು ನಿವಾರಿಸಲು ನಮ್ಮ ಇಲಾಖೆಯಿಂದ ಸಾಕಷ್ಟು ಕ್ರಮಗಳು ಆಗಿವೆ. ಇದು ನಮ್ಮ ಒಂದು ಇಲಾಖೆಯಿಂದಾದ ಲೋಪವೆಂದು ಹೇಳಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯತ್ ಸಹಕಾರ ಬೇಕಾಗುತ್ತದೆ. ಪ್ರೈಮರಿ ಶಾಲೆಯ ಎಸ್.ಡಿ.ಎಂ.ಸಿ ಸಹಕಾರ ಬೇಕಾಗುತ್ತದೆ. ಕಾನೂನು, ಆರೋಗ್ಯ, ಪೊಲೀಸ್ ಇಲಾಖೆ ಸಹಕಾರವೂ ಬೇಕು. ಎಲ್ಲರೂ ಒಗ್ಗಟಾಗಿ ಕೆಲಸ ಮಾಡಿದಾಗ ಈ ಬಾಲ್ಯ ವಿವಾಹ ತಡೆಗಟ್ಟಲು ಸಾಧ್ಯವಿದೆ.
ಇವತ್ತು ಬಳ್ಳಾರಿ ಪ್ರಥಮ ಸ್ಥಾನವಾಗಿದೆ, ಬೆಳಗಾವಿ ಎರಡನೇ ಜಿಲ್ಲೆಯಾಗಿದೆ. ಬೆಳಗಾವಿ ಎರಡನೇ ಜಿಲ್ಲೆಯಾಗಿದೆ ಎಂದು ಹೇಳಲು ನನಗೆ ಬಹಳಷ್ಟು ನಾಚಿಕೆ ಆಗುತ್ತಿದೆ. ಅದು ಮೂಡನಂಬಿಕೆಯಿಂದ ಮಾಡ್ತಾರೋ, ಏನು ಕಾರಣ ಎಂಬುದೇ ಗೊತ್ತಾಗ್ತಿಲ್ಲ. ಬಾಲ್ಯ ವಿವಾಹ ತಡೆಗೆ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ಕಮಿಟಿ ಇದೆ. ಅದರಲ್ಲಿ ವಕೀಲರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಇರ್ತಾರೆ. ಕಟ್ಟುನಿಟ್ಟಿನ ನಿರ್ದಾಕ್ಷಿಣ್ಯ ಕ್ರಮ ಆಗುತ್ತದೆ. ವಿಚಾರ ಗೊತ್ತಾದ ತಕ್ಷಣ ಎಫ್.ಐ.ಆರ್ ಮಾಡ್ತೇವೆ. ಆದ್ರೂ ಸಹ ಬಾಲ್ಯ ವಿಹಾಹ ಆಗ್ತಿದೆ, ಬಾಲ್ಯದಲ್ಲೇ ಗರ್ಭಿಣಿಯರು ಆಗ್ತಿದ್ದಾರೆ ಎನ್ನುವುದು ದುಃಖದ ಸಂಗತಿ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಈ ಜಾಢ್ಯವನ್ನು ಬೇರು ಮಟ್ಟದಿಂದ ಹೋಗಲಾಡಿಸುವ ಪ್ರಯತ್ನ ಮಾಡ್ತೇವೆ. ಈ ಬಗ್ಗೆ ಅಧಿಕಾರಿಗಳಿಗೂ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದರು.
ಇವರೇ ಸಂವಿಧಾನ ಗಾಳಿಗೆ ತೂರುತ್ತಿದ್ದಾರೆ..
ಜೂ.25ರ ದಿನವನ್ನು ತುರ್ತುಸ್ಥಿತಿ ಹೇರಿದ ನೆಪದಲ್ಲಿ ಸಂವಿಧಾನ ಹತ್ಯಾ ದಿನವಾಗಿ ಕೇಂದ್ರ ಸರಕಾರ ಘೋಷಣೆ ಮಾಡಿರುವುದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ಷೇಪಿಸಿದ್ದಾರೆ. ಕೇಂದ್ರ ಸರಕಾರ ರಾಜಕಾರಣ ಮಾಡುತ್ತಿದೆ, ಸಬ್ ಕಾ ಸಾತ್ , ಸಬ್ ಕಾ ವಿಕಾಸ್ ಇದರ ಅರ್ಥ ಏನು? ಅದರಂತೆ ಇವರು ನಡೆದು ಕೊಂಡಿದ್ದಾರಾ? ಸಂವಿಧಾನವನ್ನು ಗಾಳಿಗೆ ತೂರಿ ನಡೆದುಕೊಳ್ಳುತ್ತಿದ್ದಾರೆ. ಇವರ ಇಬ್ಬರು ಸಂಸದರು ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರು. ಅದಕ್ಕೆ ಈವರೆಗೂ ಇವರು ಉತ್ತರಿಸಿಲ್ಲ.
ಮಹಿಳೆಯರ ಮೇಲೆ ಶೋಷಣೆ ಆಗುತ್ತಿದೆ, ಕ್ರೀಡಾಪಟುಗಳ ಮೇಲೆ ದೌರ್ಜನ್ಯ ಆಗುತ್ತಿದೆ. ಹೆಣ್ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ನಡೆಯುತ್ತೆ. ಇದರ ಬಗ್ಗೆಯೆಲ್ಲ ಯಾವುದನ್ನೂ ಗಂಭೀರವಾಗಿ ಪರಿಗಣಿಸಿಲ್ಲ. ಈಗ ಸಂವಿಧಾನ ಹತ್ಯಾ ದಿನ ಅಂತಿದ್ದಾರೆ. ಮೊದಲು ಅವರು ಸಂವಿಧಾನ ಬದ್ದತೆಯೊಂದಿಗೆ ರಾಜಕಾರಣ ಮಾಡಲಿ ಎಂದು ಟೀಕಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಹಿರಿಯ ನಾಯಕ ಮಿಸ್ತ್ರಿ ನೇತೃತ್ವದಲ್ಲಿ ಸಭೆ ನಡೆಯುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಕುರಿತು ಚರ್ಚೆ ನಡೆಸಲಾಗಿದೆ. ಸೋಲಿಗೆ ಕಾರಣಗಳ ಬಗ್ಗೆ ಅವಲೋಕನ ನಡೆಸಲಾಗಿದೆ. ಯಾರಿಂದ, ಹೇಗೆ ಸೋಲಾಗಿದೆ ಎಂಬುದರ ಬಗ್ಗೆ ಚರ್ಚೆ ನಡೆದಿಲ್ಲ ಎಂದುತ್ತರಿಸಿದರು.
Karnataka ranks second in Child marriage says Lakshmi Hebbalkar in Mangalore.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm