ಬ್ರೇಕಿಂಗ್ ನ್ಯೂಸ್
17-07-24 12:35 pm Mangalore Correspondent ಕರಾವಳಿ
ಮಂಗಳೂರು, ಜುಲೈ.17: ರೈಲ್ವೇ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರಿಗೆ ಆಗಮಿಸಿದ್ದಾರೆ. ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಸಚಿವ ವಿ. ಸೋಮಣ್ಣ, ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ಮೇಲ್ದರ್ಜೆಗೇರಿಸಲು ಎರಡು ತಿಂಗಳಲ್ಲಿ ರೂಪುರೇಷೆ ತಯಾರಿಸಲಾಗುವುದು ಎಂದು ತಿಳಿಸಿದರು.
ಕಳೆದ ಸುಮಾರು 40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೇ ಆಭಿವೃದ್ಧಿ ಕೆಲಸಗಳು ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ಕಾಯಕಲ್ಪ ನೀಡಲಾಗುವುದು. ಮಂಗಳೂರು , ಕಾರವಾರ ಭಾಗದಲ್ಲಿ ರೈಲ್ವೇ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ರೀತಿ ಆಗಿಲ್ಲ. ಈ ನಿಟ್ಟಿನಲ್ಲಿ ಎರಡು ತಿಂಗಳೊಳಗೆ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ನೀಲನಕ್ಷೆ ತಯಾರಿಸಲಾಗುವುದು ಎಂದರು.
ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೇ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Union Minister of State in Ministry of Railways visits Mangalore Central railway station, talks about the developement of the station. Promises of development of station in 2 months.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm