ಬ್ರೇಕಿಂಗ್ ನ್ಯೂಸ್
07-12-20 06:42 pm Mangalore Correspondent ಕರಾವಳಿ
ಮಂಗಳೂರು, ಡಿ.7: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಪಂಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಕೊರೊನಾ ಕಾರಣದಿಂದ ಇವಿಎಂ ಬದಲಿಗೆ ಮತಪತ್ರಗಳಿಂದಲೇ ಮತದಾನ ನಡೆಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯ 7 ತಾಲೂಕುಗಳಲ್ಲಿ 1527 ಮತಗಟ್ಟೆಗಳನ್ನು ತೆರೆಯಲಾಗುವುದು. ಆ ಪೈಕಿ 397 ಸೂಕ್ಷ್ಮ ಮತ್ತು 198 ಅತಿ ಸೂಕ್ಷ್ಮ ಹಾಗೂ 931 ಸಾಮಾನ್ಯ ಮತಗಟ್ಟೆಗಳಿವೆ. ಅಲ್ಲದೆ 2626 ಮತಪೆಟ್ಟಿಗೆಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಇದ್ದಾರೆ. ಚುನಾವಣೆ ಕರ್ತವ್ಯಕ್ಕೆ, 220 ಚುನಾವಣಾ ಅಧಿಕಾರಿ ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯುಕ್ತಿ ಮಾಡಲಾಗುವುದು ಎಂದು ಅವರು ಹೇಳಿದರು.

ಮತಪತ್ರಗಳ ಮುದ್ರಣಕ್ಕೆ ಸಂಬಂಧಿಸಿ ಸಹಾಯಕ ಆಯುಕ್ತರು ಮತ್ತು ಆಯಾ ತಹಸೀಲ್ದಾರರಿಗೆ ಜವಾಬ್ದಾರಿ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಲು ಕ್ರಮ ವಹಿಸಲಾಗುವುದು, ಇದಕ್ಕಾಗಿ ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಡಿಸಿ ರೂಪಾ ಉಪಸ್ಥಿತರಿದ್ದರು.
As many as 10,39,217 voters will be voting in the gram panchayat elections in the district, informed deputy commissioner (DC) Dr K V Rajendra.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm