ಬ್ರೇಕಿಂಗ್ ನ್ಯೂಸ್
03-08-24 11:11 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳ ಬಗ್ಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಇತರೇ ಆರೋಪಿಗಳಿಗೆ ಕೃತ್ಯ ಎಸಗಲು ತರಬೇತಿ ನೀಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದ ಮನ್ಸೂರ್ ಪಾಷಾ ಮತ್ತು ರಿಯಾಜ್ ವೈ.ಎಚ್ ಎಂಬವರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.
ಎರಡು ವರ್ಷಗಳಿಂದ ತಪ್ಪಿಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಸಕಲೇಶಪುರದ ಕಾಫಿ ಎಸ್ಟೇಟ್ ನಿಂದ ಪತ್ತೆ ಮಾಡಲಾಗಿತ್ತು. ಆತ ತನ್ನ ನಿಜ ಹೆಸರು ಮುಚ್ಚಿಟ್ಟು ಅಡಗಿಕೊಳ್ಳಲು ಮನ್ಸೂರ್ ಪಾಷಾ ಸಹಕಾರ ನೀಡಿದ್ದ. ಮುಸ್ತಫಾನನ್ನು ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮನ್ಸೂರ್ ನನ್ನೂ ಬಂಧಿಸಲಾಗಿತ್ತು. ಇದೀಗ ಆತನ ಪಾತ್ರ ಮತ್ತು ಕೊಲೆ ಪ್ರಕರಣದಲ್ಲಿ ಸಹಕಾರ ನೀಡಿದ ವಿಚಾರವನ್ನು ಅಧಿಕಾರಿಗಳು ಪಟ್ಟಿ ಮಾಡಿದ್ದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಇನ್ನೊಬ್ಬ ಆರೋಪಿ ರಿಯಾಜ್ ಕೂಡ ಮುಸ್ತಫಾ ತಪ್ಪಿಸಿಕೊಳ್ಳಲು ನೆರವು ನೀಡಿದ್ದ ಎನ್ನಲಾಗಿದ್ದು, ಜೂನ್ 6ರಂದು ಮುಂಬೈ ಏರ್ಪೋರ್ಟ್ ಮೂಲಕ ವಿದೇಶಕ್ಕೆ ಹಾಲು ಯತ್ನಿಸುತ್ತಿದ್ದಾಗಲೇ ಬಂಧಿತನಾಗಿದ್ದ, ಇದೀಗ ರಿಯಾಜ್ ವಿರುದ್ಧವೂ ಎನ್ಐಎ ಅಧಿಕಾರಿಗಳು ಚಾರ್ಜ್ ಶೀಟ್ ಹಾಕಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಈವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಏಳು ಮಂದಿ ತಲೆತಪ್ಪಿಸಿಕೊಂಡಿದ್ದು, ಅವರ ಸುಳಿವು ಕೊಟ್ಟವರಿಗೆ ತಲಾ 5 ಮತ್ತು 2 ಲಕ್ಷದ ಬಹುಮಾನ ಘೋಷಣೆ ಮಾಡಲಾಗಿದೆ. 2022ರ ಜುಲೈ 27ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಕಡಿದು ಕೊಲೆ ಮಾಡಲಾಗಿತ್ತು. ಹಿಂದುಗಳನ್ನು ಭಯ ಪಡಿಸುವ ಉದ್ದೇಶದಿಂದ ಪಿಎಫ್ಐ ಸಂಘಟನೆ ಪೂರ್ವ ನಿಯೋಜಿತವಾಗಿ ಈ ಕೃತ್ಯವನ್ನು ಎಸಗಿತ್ತು ಎನ್ನೋದು ತನಿಖೆಯಲ್ಲಿ ಕಂಡುಬಂದಿತ್ತು.
The National Investigation Agency (NIA) has filed a supplementary chargesheet against two accused for harbouring Mustafa Paichar, the key conspirator in the murder of Praveen Nettaru, a BJP Yuva Morcha leader.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm