ಬ್ರೇಕಿಂಗ್ ನ್ಯೂಸ್
08-12-20 03:04 pm Mangalore Correspondent ಕರಾವಳಿ
ಮಂಗಳೂರು, ಡಿ. 2: ಭಾರತ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಿಕೊಂಡು ನಂತೂರು ಸರ್ಕಲ್ ಬಳಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಹಸಿರು ಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫರ್ನಾಂಡಿಸ್ ಮಾತನಾಡಿ, ದಪ್ಪ ಚರ್ಮದ ರಾಜಕಾರಣಿಗಳಿಗೆ ದೇಶದ ರೈತರ ಸಂಕಟ, ನೋವು ಅರ್ಥವಾಗಲ್ಲ. ಇದರಿಂದಾಗಿ ಅನ್ನ ನೀಡುವ ರೈತರು ಬೀದಿಗಿಳಿಯಬೇಕಾದ ಸ್ಥಿತಿ ಬಂದಿದೆ ಎಂದು ಹೇಳಿದರು.
ಕೇಂದ್ರ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳು, ರೈತರ ಪಾಲಿಗೆ ಮರಣ ಶಾಸನವಾಗಿದೆ. ಇದನ್ನು ಹಿಂಪಡೆಯಬೇಕು. ರೈತರು ನ್ಯಾಯಕ್ಕಾಗಿ ಬಂದ್ ಮಾಡಿದರೆ ನಷ್ಟ ಎಂದು ಹೇಳುವವರು ಶಾಸಕರನ್ನು ಖರೀದಿಸಿ ಸರಕಾರ ಮಾಡುವಾಗ, ಎರಡೆರಡು ಬಾರಿ ಚುನಾವಣೆ ನಡೆಸಿದಾಗ ಆಗಿರುವ ನಷ್ಟದ ಬಗ್ಗೆ ಮಾತನಾಡಿಲ್ಲ. ನಾವು ಎಲ್ಲಿಯೂ ಬಲಾತ್ಕಾರವಾಗಿ ಬಂದ್ ಮಾಡಿಸಿಲ್ಲ. ಸ್ವಯಂ ಪ್ರೇರಿತವಾಗಿ ರೈತರ ಪರವಾಗಿ ಈ ಬಂದ್ ನಡೆಯುತ್ತಿದೆ ಎಂದರು.
ಹಲವು ದಿನಗಳಿಂದ ದೇಶದಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಅದನ್ನು ಎದುರಿಸಲಾಗದೆ ರಸ್ತೆಗಳಿಗೆ ಬೇಲಿ ಹಾಕಿ, ಅಶ್ರುವಾಯು ಸಿಡಿಸಿ, ಜಲಫಿರಂಗಿ ಬಳಸಿ ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾಗೆ ತಾಯಿ ಹೃದಯವೇ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಾದವ ಶೆಟ್ಟಿ, ಮನೋಹರ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜಾ, ಜೆಡಿಎಸ್ ಮುಖಂಡ ಎಂ.ಬಿ. ಸದಾಶಿವ ಮೊದಲಾದವರು ಮಾತನಾಡಿದರು. ಮಾಜಿ ಶಾಸಕ ಮೊಯ್ದಿನ್ ಬಾವ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಆಲ್ವಿನ್ ಮಿನೇಜಸ್, ಸನ್ನಿ ಡಿಸೋಜಾ, ಲಿಯೋ ನಝರತ್, ಶ್ರೀಧರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ಜಯಂತಿ ಶೆಟ್ಟಿ, ವಿದ್ಯಾ ದಿನಕರ್, ಬಿ.ಕೆ. ಇಮ್ತಿಯಾಝ್, ಸಂತೋಷ್ ಬಜಾಲ್ ಮೊದಲಾದವರು ಇದ್ದರು.
In solidarity of Bharat Bandh, several organisations including farmers’ association, Congress, CPIM, DYFI and social activists, staged a protest here at Nanthoor on Tuesday, December 8, against the three farm laws enacted by the Centre.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm