ಬ್ರೇಕಿಂಗ್ ನ್ಯೂಸ್
06-08-24 10:32 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಜನರ ಆಡುಭಾಷೆ ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಕುರಿತಾಗಿ ಸಂಸತ್ತಿನಲ್ಲಿ ಪ್ರಶ್ನೆ ಕೇಳಿ ಮಾಹಿತಿ ಪಡೆದಿದ್ದಾರೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ ಇದೆಯೇ ಮತ್ತು ಸರ್ಕಾರ ಈ ಬಗೆಗೆ ಯಾವೆಲ್ಲ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ.
ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪತ್ರ (2003) ಸಮಿತಿಯ ಪ್ರಯತ್ನಗಳನ್ನು ಗಮನದಲ್ಲಿಟ್ಟು ಸಂವಿಧಾನದ ಎಂಟನೇ ಪರಿಚ್ಛೇದದ ಅಡಿಯಲ್ಲಿ ಹೆಚ್ಚಿನ ಭಾಷೆಗಳ ಪರಿಗಣಿಸಲು ಯಾವೆಲ್ಲಾ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೇ ಅವರು, ತುಳು ಸೇರಿದಂತೆ ಇನ್ನಿತರ ಹಲವಾರು ಭಾಷೆಗಳನ್ನು ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಕಾಲ ಕಾಲಕ್ಕೆ ಬೇಡಿಕೆಗಳು ಬರುತ್ತಿವೆ, ಆದರೆ ಯಾವುದೇ ಭಾಷೆಯನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಯಾವುದೇ ಸ್ಥಿರ ಮಾನದಂಡಗಳಿಲ್ಲ. ಉಪಭಾಷೆಗಳು ಮತ್ತು ಭಾಷೆಗಳ ವಿಕಸನವು ಕ್ರಿಯಾತ್ಮಕ ಪ್ರಕ್ರಿಯೆಯಾಗಿದ್ದು ಇದರ ಅಭಿವೃದ್ಧಿಯು ಸಾಮಾಜಿಕ - ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುತ್ತದೆ.
ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಲು ಭಾಷೆಗಳಿಗೆ ನಿರ್ದಿಷ್ಟ ಮಾನದಂಡವನ್ನು ನಿಗದಿಪಡಿಸುವುದು ಕಷ್ಟಕರವಾಗಿದೆ. ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪತ್ರ (2003) ಸಮಿತಿಗಳ ಮೂಲಕ ನಿಶ್ಚಿತ ಮಾನದಂಡಗಳನ್ನ ನಿಗದಿಪಡಿಸಲು ಪ್ರಯತ್ನ ನಡೆದಿತ್ತಾದರೂ ಅದು ಸಾಧ್ಯವಾಗಿಲ್ಲ. ಆಯಾ ಭಾಗದ ಜನರ ಭಾವನೆಗಳನ್ನು ಪರಿಗಣಿಸಿ ಇತರ ಭಾಷೆಗಳನ್ನು 8ನೇ ಶೆಡ್ಯೂಲ್‌ಗೆ ಸೇರಿಸುವ ಪ್ರಸ್ತಾಪಕ್ಕೆ ಸರ್ಕಾರದ ಸಹಮತ ಇದೆ ಎಂದಿದ್ದಾರೆ.
ಈಗಾಗಲೇ 22 ಭಾಷೆಗಳನ್ನು ಸಂವಿಧಾನಕ್ಕೆ ಸೇರ್ಪಡೆ ಮಾಡಿದ್ದು ತುಳುವನ್ನು ಸೇರಿಸಬೇಕೆಂಬ ಹಕ್ಕೊತ್ತಾಯ ಕರಾವಳಿಯಲ್ಲಿ ಹೆಚ್ಚಿದೆ.
Dakshina Kannada MP Captain Brijesh Chowta has raised a question in Parliament on the inclusion of Tulu, the dialect of the coastal people, in the Eighth Schedule of the Constitution. "Has it come to the notice of the government that the people of Dakshina Kannada, Udupi and Kasaragod are demanding the inclusion of Tulu language in the 8th schedule and what steps have been taken by the government in this regard?" he asked.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm