ಬ್ರೇಕಿಂಗ್ ನ್ಯೂಸ್
12-08-24 08:14 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.12: ಆರೋಗ್ಯ ಕ್ಷೇತ್ರದಲ್ಲಿ ಉನ್ನತ ಮಟ್ಟದ ಛಾಪನ್ನು ಮೂಡಿಸಿದ ಮಂಗಳೂರಿನ ಫಳ್ನೀರಿನ ಇಂದಿರಾ ಆಸ್ಪತ್ರೆ 25ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದು ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಕಾರ್ಯಕ್ರಮ ಹಮ್ಮಿಕೊಂಡಿದೆ. 25 ವರ್ಷಗಳಲ್ಲಿ ಆಸ್ಪತ್ರೆ ಜೊತೆಗೆ ನರ್ಸಿಂಗ್ ಕಾಲೇಜು ಬೃಹತ್ತಾಗಿ ಮತ್ತು ಅತ್ಯಾಧುನಿಕ ವೈದ್ಯಕೀಯ ಕೇಂದ್ರವಾಗಿ ಬೆಳೆದು ನಿಂತಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಸಯ್ಯದ್ ನಿಜಾಮುದ್ದೀನ್ ಹೇಳಿದರು.
1999ರಲ್ಲಿ ಸ್ಥಾಪನೆಯಾದಾಗಿನಿಂದ ಆಸ್ಪತ್ರೆ ಸಾರ್ವಜನಿಕರಿಗೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು ನೀಡುತ್ತ ಬಂದಿದೆ. ತುರ್ತು ಆರೈಕೆ, ಶಸ್ತ್ರಚಿಕಿತ್ಸೆ, ಡಯಾಲಿಸಿಸ್, ಮೆಟರ್ನಿಟಿ, ಮೆಡಿಸಿನ್, ಫಿಸಿಯೋಥೆರಪಿ ಸೇರಿದಂತೆ ವಿಶಾಲವಾದ ಸೇವೆಗಳನ್ನು ಒದಗಿಸುತ್ತಿದೆ. ಇದರ ಜೊತೆಗೆ, ಇಂದಿರಾ ಎಜ್ಯುಕೇಶನಲ್
ಟ್ರಸ್ಟ್ ಆರಂಭಿಸಿದ್ದು ನರ್ಸಿಂಗ್, ಅಲೈಡ್ ಸೈನ್ಸ್ ಮತ್ತು ಫಿಸಿಯೋಥೆರಪಿ ಕೋರ್ಸ್‌ಗಳನ್ನು ನೀಡುತ್ತಿದ್ದೇವೆ. 60 ವಿದ್ಯಾರ್ಥಿಗಳಿಂದ ಆರಂಭಗೊಂಡ ನಮ್ಮ ಕಾಲೇಜಿನಲ್ಲಿ ಈಗ ವಿವಿಧ 12 ವಿಭಾಗದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ನೀಡುತ್ತಿದ್ದು 1200 ವಿದ್ಯಾರ್ಥಿಗಳಿದ್ದಾರೆ ಎಂದವರು ಹೇಳಿದರು.
ಇಂದಿರಾ ಆಸ್ಪತ್ರೆ ತನ್ನ ಗೌರವಾನ್ವಿತ ವೈದ್ಯರು ಮತ್ತು ಸಿಬ್ಬಂದಿಯ ಕೊಡುಗೆಗಳನ್ನು ಗೌರವಿಸಲು ವಾರ್ಷಿಕೋತ್ಸವ ಸಂಭ್ರಮ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸಮುದಾಯ ಆರೋಗ್ಯವನ್ನು ಬೆಂಬಲಿಸಲು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. 25ನೇ ವಾರ್ಷಿಕೋತ್ಸವ ಆಚರಣೆ ಆ.15 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ನನ್ ಸೆಂಟರ್‌ನಲ್ಲಿ ನಡೆಯಲಿದೆ. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಯೆನೆಪೋಯ ವಿಶ್ವವಿದ್ಯಾಲಯದ ಗೌರವ ಕುಲಪತಿ ಡಾ.ಅಬ್ದುಲ್ಲಾ ಕುಂಞ ಮತ್ತು ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ನೋಂದಣಾಧಿಕಾರಿ ಡಾ.ರಿಯಾಜ್ ಬಾಷಾ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ಸಯ್ಯದ್ ಜಮಾಲುದ್ದೀನ್, ಅಶ್ರಫ್ ಉಪಸ್ಥಿತರಿದ್ದರು.
Mangalore Falnir Indira hospital to celebrate 25th anniversary, medical college which started with 60 students has now reached having 1200 students.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm