ಬ್ರೇಕಿಂಗ್ ನ್ಯೂಸ್
16-08-24 10:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಮಂಗಳೂರಿನ ಬೆಂಗ್ರೆ ಪರಿಸರದ ಸುಮಾರು 600 ಕುಟುಂಬಗಳಿಗೆ 1994ನೇ ಇಸವಿಯಲ್ಲಿ ಕೊಡಲಾಗಿದ್ದ ಹಕ್ಕುಪತ್ರಗಳಲ್ಲಿ ಚೆಕ್ ಬಂದಿ ಹಾಗೂ ಸರ್ವೇ ನಂಬರ್ ಇಲ್ಲದಂತಹ ಮನೆಗಳಿಗೆ ಹೊಸದಾಗಿ ತಿದ್ದುಪಡಿ ಮಾಡಿ 2023 ರ ಜನವರಿ, ಫೆಬ್ರವರಿ ವೇಳೆಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗಿದ್ದು ನಂತರದ ದಿನಗಳಲ್ಲಿ ಸ್ಥಗಿತಗೊಂಡಿದ್ದ ಮುಂದಿನ ಪ್ರಕ್ರಿಯೆಗಳು ಈಗ ಮತ್ತೆ ಚಾಲನೆಗೊಂಡಿವೆ ಮತ್ತು ಶೀಘ್ರದಲ್ಲಿ ಎಲ್ಲರಿಗೂ ಸಿಹಿ ಸುದ್ದಿ ಲಭಿಸಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಕಳೆದ ವರ್ಷ ಹಕ್ಕುಪತ್ರಗಳನ್ನು ಪಡೆದುಕೊಂಡಿದ್ದ ಬೆಂಗ್ರೆ ಪರಿಸರದ 600 ಕುಟುಂಬಗಳು ನಿರಾಕ್ಷೇಪಣ ಪತ್ರಕ್ಕಾಗಿ (ಎನ್ ಒ ಸಿ) ಮಂಗಳೂರಿನ ಕಂದಾಯ ಇಲಾಖೆಗೆ ಅರ್ಜಿಯನ್ನು ಸಲ್ಲಿಸಿದ ಸಂದರ್ಭದಲ್ಲಿ ಚುನಾವಣೆಗಳು ಎದುರಾಗಿ ಎಲ್ಲಾ ಪ್ರಕ್ರಿಯೆಗಳು ಸ್ಥಗಿತಗೊಂಡಿದ್ದವು. ಇದೀಗ ಮತ್ತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. 600 ಮನೆಗಳಿಗೆ ಹಕ್ಕುಪತ್ರ ಕೊಟ್ಟ ನಂತರ ನಿರಾಕ್ಷೇಪಣಾ ಪತ್ರ (ಎನ್ ಒ ಸಿ) ಕೊಡದೇ ವಿಳಂಬ ನೀತಿ ಅನುಸರಿಸುವುದು ಯಾವುದೇ ಕಾರಣಕ್ಕೂ ಸಮ್ಮತವಲ್ಲ.
ಹೀಗಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳೂರಿಗೆ ಆಗಮಿಸಿದ್ದಾಗ ಈ ವಿಚಾರವನ್ನು ಗಮನಕ್ಕೆ ತಂದಿದ್ದಲ್ಲದೇ, ಎರಡೆರಡು ಬಾರಿ ಅಧಿವೇಶನದಲ್ಲೂ ಪ್ರಸ್ತಾಪಿಸಿ ಕಂದಾಯ ಸಚಿವರ ಗಮನಕ್ಕೂ ತರಲಾಗಿತ್ತು. ಜೊತೆಗೆ ಕಂದಾಯ ಇಲಾಖೆಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳ ಜೊತೆಯಲ್ಲೂ ಚರ್ಚೆ ನಡೆಸಲಾಗಿದ್ದು ಇದೀಗ ನಿರಂತರ ಪ್ರಯತ್ನದ ಫಲವಾಗಿ ಶೀಘ್ರದಲ್ಲೇ ನಿರಪೇಕ್ಷಣಾ ಪತ್ರ ಲಭಿಸಲಿದೆ. ಕೂಡಲೇ ಗ್ರಾಮ ಲೆಕ್ಕಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸಿ ನಿರಾಕ್ಷೇಪ ಪತ್ರವನ್ನು ಪಡೆದುಕೊಂಡು ಅದನ್ನು ಮಂಗಳೂರು ಮಹಾನಗರ ಪಾಲಿಕೆಗೆ ಸಲ್ಲಿಸಿ ಖಾತಾವನ್ನು ಪಡೆದುಕೊಳ್ಳುವಂತೆ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗ್ರೆ ಪರಿಸರದ ಉಳಿದ ಸುಮಾರು 200ಕ್ಕೂ ಅಧಿಕ ಕುಟುಂಬಗಳು 1994ನೇ ಇಸವಿಯಲ್ಲಿ ಹಕ್ಕುಪತ್ರವನ್ನು ಪಡೆದುಕೊಳ್ಳುವಾಗ ಸರ್ಕಾರಕ್ಕೆ ಹಣ ಪಾವತಿ ಮಾಡಿದ ಬಗ್ಗೆ ದಾಖಲೆಗಳು ಲಭ್ಯವಿಲ್ಲದೇ ತಾಂತ್ರಿಕ ದೋಷವುಂಟಾಗಿತ್ತು. ಹಾಗಾಗಿ ಅವರೆಲ್ಲರೂ ಮತ್ತೆ ಸರ್ಕಾರಕ್ಕೆ ಹಣವನ್ನು ಪಾವತಿಸಬೇಕಾಗಿ ನೂತನ ಸರ್ಕಾರ ಆದೇಶ ಹೊರಡಿಸಿದ್ದು ಈ ಬಗ್ಗೆ ನನ್ನ ಆಕ್ಷೇಪವಿದ್ದು, 94ನೇ ಇಸವಿಯಲ್ಲೇ ಅವರೆಲ್ಲರೂ ಹಕ್ಕುಪತ್ರ ಪಡೆದುಕೊಂಡಿದ್ದಾರೆ ಎಂದರೆ ಸರ್ಕಾರದ ನೀತಿ ನಿಯಮಗಳನ್ನು ಪಾಲಿಸಿದ್ದಾರೆ ಎಂದರ್ಥ. ಈಗ ಸರ್ಕಾರ ಕೊಡುತ್ತಿರುವುದು ಹೊಸ ಹಕ್ಕುಪತ್ರವಲ್ಲ. ಹಾಗಾಗಿ ಈ ಹಿಂದಿನ ಹಕ್ಕುಪತ್ರ ಪಡೆಯಲು ಮತ್ತೆ ಸಾವಿರಾರು ರೂಪಾಯಿಗಳನ್ನು ಪಾವತಿಸಬೇಕು ಎಂಬುದು ಯಾವುದೇ ಕಾರಣಕ್ಕೂ ಸರಿಯಲ್ಲ ಎಂದು ಕಂದಾಯ ಸಚಿವರ ಸಹಿತ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಹಾಗಾಗಿ ಅವರಿಗೂ ಸಹ ಮುಂದಿನ ಕೆಲವೇ ದಿನಗಳಲ್ಲಿ ಹಕ್ಕುಪತ್ರ ಸಿಗಲಿದ್ದು ಸುಮಾರು 40 ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಪರಿತಪಿಸುತ್ತಿರುವ ಬೆಂಗ್ರೆ ಪರಿಸರದ ಜನತೆಗೆ ಶೀಘ್ರದಲ್ಲಿ ಸಿಹಿಸುದ್ದಿ ಸಿಗಲಿದೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.
ನಾಲ್ಕು ದಶಕಗಳಿಂದ ಹಕ್ಕುಪತ್ರಕ್ಕಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಿಯೂ ಶೂನ್ಯ ಫಲಿತಾಂಶದಿಂದ ಹತಾಶರಾಗಿದ್ದ ನಮಗೆ ಈ ಮೂಲಕ ಮತ್ತೊಮ್ಮೆ ಭರವಸೆ ಮೂಡಿದ್ದು ಇದಕ್ಕೆ ಕಾರಣೀಭೂತರಾದ ಶಾಸಕ ವೇದವ್ಯಾಸ ಕಾಮತರಿಗೆ ನಾವೆಂದೂ ಚಿರಋಣಿ ಎಂದು ಬೆಂಗ್ರೆ ಪರಿಸರ ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
Mla Vedavyas Kamath said that the title deeds issued to about 600 families in Bengre area of Mangaluru in 1994 were amended in 1994 and the title deeds were issued by January and February 2023 by January and February 2023.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm