ಬ್ರೇಕಿಂಗ್ ನ್ಯೂಸ್
17-08-24 10:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.17: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆ ಹಾಗೂ ಸಂವಿಧಾನದ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ, ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.
"ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಶನಿವಾರ ನೀಡಿದ ಅನುಮತಿಯಿಂದ ಜನ ವಿರೋಧಿ ಭ್ರಷ್ಟ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸತ್ಯಕ್ಕೆ ಜಯ ಸಿಗಲೇಬೇಕು ಎನ್ನುವುದು ಅರ್ಥವಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಚಾರದ ಪ್ರಕರಣವಾಗಿರದೇ, ದುರ್ಬಲ, ಬಡ ವರ್ಗದ ಜನರಿಗೆ ಎಸಗಿರುವ ವಂಚನೆಯಾಗಿದೆ.

"ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ, ಸಣ್ಣದೊಂದು ಕಪ್ಪು ಚುಕ್ಕಿ ಇಲ್ಲದಂತೆ ರಾಜಕೀಯ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎನ್ನುವ ರೀತಿ ಸಾರ್ವಜನಿಕವಾಗಿ ಸಾರುತ್ತಾ ಬಂದಿರುವ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ರಾಜ್ಯದ ಜನತೆಗೆ ಮೋಸ ಮಾಡಿದ್ದಾರೆ"
"ಒಂದೆಡೆ ಕಾಂಗ್ರೆಸ್ ರಾಜ್ಯದ ಬೊಕ್ಕಸವನ್ನೇ ಖಾಲಿ ಮಾಡಿದ್ದು, ಮತ್ತೊಂದೆಡೆ ಬಡವರ ಹಕ್ಕುಗಳನ್ನು ನಿರ್ಲಕ್ಷಿಸಿ ತಮ್ಮ ಖಜಾನೆ ತುಂಬಿಸಿಕೊಂಡಿದೆ. ಇದು ಹಗಲು ದರೋಡೆಯಾಗಿದ್ದು, ಇನ್ನು ಮುಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯ ಪ್ರಭಾವ ಬೀರಿ ನುಣುಚಿಕೊಳ್ಳಲು ಸಾಧ್ಯವಿಲ್ಲ."
"ಪ್ರಜಾಪ್ರಭುತ್ವದ ಮೇಲೆ ಜನತೆಗಿರುವ ನಂಬಿಕೆ ಉಳಿಸಲು, ಸಿದ್ದರಾಮಯ್ಯ ಅವರು ಈ ಕೂಡಲೇ ಸಿಎಂ ಸ್ಥಾನ ತ್ಯಜಿಸುವ ಸಮಯ ಬಂದಿದ್ದು, ತಮ್ಮ ವಿರುದ್ದ ಕೇಳಿಬಂದಿರುವ ಎಲ್ಲಾ ಆರೋಪಗಳಿಗೆ ಜನತೆ ಮುಂದೆ ಉತ್ತರಿಸಲಿ" ಎಂದು ಸಂಸದ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
Mp Brijesh Chowta slams CM Siddaramaiah, says he must resign in Muda case. Karnataka Chief Minister Siddaramaiah faces a big challenge as the Governor has sanctioned his prosecution over alleged irregularities in the site allotment by the Mysuru Urban Development Authority (MUDA).
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm