ಬ್ರೇಕಿಂಗ್ ನ್ಯೂಸ್
21-08-24 01:28 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.21: ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು- ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿದ್ದ ಮಣ್ಣಿನ ರಾಶಿಯನ್ನು ಸಂಪೂರ್ಣ ತೆರವುಗೊಳಿಸಿದ್ದು, ಇದರ ಬೆನ್ನಲ್ಲೇ ರೈಲು ಸಂಚಾರ ಎಂದಿನಂತೆ ಆರಂಭಗೊಂಡಿದೆ.
ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ಸೋಮವಾರ ರಾತ್ರಿಯೇ ರೈಲು ಸಂಚಾರ ಆರಂಭಗೊಂಡಿತ್ತು. ರೈಲು ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳವಾರ ಸಂಚರಿಸಬೇಕಿದ್ದ ಮಂಗಳೂರು ಸೆಂಟ್ರಲ್- ವಿಜಯಪುರ ಎಕ್ಸ್ ಪ್ರೆಸ್ ರೈಲು ಮಾತ್ರ ರದ್ದಾಗಿದ್ದು, ಉಳಿದ ಎಲ್ಲಾ ರೈಲುಗಳು ನಿಗದಿತ ಸಮಯದ ಪ್ರಕಾರ ಸಂಚರಿಸಿದೆ. ಮಣ್ಣು ಕುಸಿತಗೊಂಡ ಸ್ಥಳದಲ್ಲಿ ರೈಲು ಸಂಚಾರದ ವೇಗಕ್ಕೆ ಮಿತಿ ಹೇರಲಾಗಿದೆ. ಗುಡ್ಡದ ಭಾಗದಿಂದಲೇ ಮಣ್ಣನ್ನು ತೆರವುಗೊಳಿಸುವ ಮೂಲಕ ಸಂಚಾರಕ್ಕೆ ಮಾರ್ಗವನ್ನು ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ವಾರದ ಹಿಂದೆ ಗುಡ್ಡ ಕುಸಿದಿದ್ದ ಜಾಗದಲ್ಲಿ ಶುಕ್ರವಾರ ಮತ್ತೆ ಮಣ್ಣು ಕುಸಿದಿತ್ತು. ಇದರಿಂದ ರೈಲು ಸಂಚಾರವನ್ನು ಮತ್ತೆ ಮೂರು ದಿನ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳ ಬಳಿಕ ಮಂಗಳೂರು - ಬೆಂಗಳೂರು ರೈಲು ಸೇವೆಗಳು ಪ್ರಾರಂಭಗೊಂಡಿವೆ. ಈ ಬಾರಿ ಜುಲೈ - ಆಗಸ್ಟ್ ಒಂದು ತಿಂಗಳ ಅಂತರದಲ್ಲಿ ಸಕಲೇಶಪುರ ಆಸುಪಾಸಿನಲ್ಲಿ ನಾಲ್ಕು ಕಡೆ ಗುಡ್ಡ ಕುಸಿತ ಆಗಿದ್ದು ರೈಲು ಸಂಚಾರಕ್ಕೆ ತೊಡಕಾಗಿತ್ತು.
Train services resume after landslide cleared in Bangalore Mangalore route. Landslides on the railway track between Ballupete and Sakleshpur stations had caused significant disruptions to two trains operating on the Bengaluru-Mangaluru route. The Yeshwantpur-Karwar train faced partial cancellation between Hassan and Karwar, while the Mangaluru Junction-Yeshwantpur train was compelled to terminate at Sakleshpur due to the landslide.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm