Mangalore rain: ಮುಂದಿನ ಎರಡು ದಿನ ಕರಾವಳಿಗೆ ವರುಣಾರ್ಭಟ ; ಆರೆಂಜ್ ಅಲರ್ಟ್ ಘೋಷಣೆ

24-08-24 10:34 pm       Mangalore Correspondent   ಕರಾವಳಿ

ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಜಫರು ಮಳೆಯಾಗಿದ್ದರೆ, ಇತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರ್ಗಿ, ವಿಜಯಪುರ ಯಾದಗಿರಿ ಹಾಗೂ ಶಿವಮೊಗ್ಗದಲ್ಲೂ ಅತಿ ಭಾರೀ ಮಳೆಯಾಗಿದೆ

ಬೆಂಗಳೂರು, ಆ 24: ಇಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಜಫರು ಮಳೆಯಾಗಿದ್ದರೆ, ಇತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರ್ಗಿ, ವಿಜಯಪುರ ಯಾದಗಿರಿ ಹಾಗೂ ಶಿವಮೊಗ್ಗದಲ್ಲೂ ಅತಿ ಭಾರೀ ಮಳೆಯಾಗಿದೆ

ಮುಂದಿನ ಎರಡು ದಿನ ಕರಾವಳಿಗೆ ವರುಣಾರ್ಭಟ ಭಾನುವಾರ ಹಾಗೂ ಸೋಮವಾರ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಅತಿಭಾರೀ ಮಳೆಯಾಗುವ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಆಗಸ್ಟ್ 30 ರವರೆಗೂ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಭಾನುವಾರ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಮವಾರದಿಂದ ಮಳೆ ಪ್ರಮಾಣ ಇಳಿಕೆಯಾಗಲಿದ್ದು, ಆಗಸ್ಟ್ 29,30 ರ ನಂತರ ಭಾರೀ ಮಳೆಯಾಗಲಿರುವ ಹಿನ್ನಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡದಲ್ಲಿ ಭಾರೀ ಮಳೆ ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ. ಶುಕ್ರವಾರ ರಾತ್ರಿಯಿಂದ ಶನಿವಾರ ದಿನವಿಡೀ ಮಳೆ ರಭಸವಾಗಿ ಅಬ್ಬರಿಸಿದ್ದು, ಕರಾವಳಿ ಭಾಗದಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ. ಮಳೆ, ಗಾಳಿ ರಭಸ ಹೆಚ್ಚಾಗಿದೆ. ಇದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಿ ತೀರದಲ್ಲಿಆರ್ಭಟಿಸುತ್ತಿವೆ. ಕಡಲ ಕೊರೆತವೂ ಹೆಚ್ಚಾಗಿದೆ. ಕಾರವಾರ, ಅಂಕೋಲಾ, ಗೋಕರ್ಣದಲ್ಲಿಸಮುದ್ರ ತೀರಗಳಿಗೆ ಹಾನಿಯಾಗಿವೆ. ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ403.6 ಮಿ.ಮೀ. ಮಳೆಯಾಗಿದೆ. ಕಾರವಾರ, ಅಂಕೋಲಾ, ಹೊನ್ನಾವರ, ಶಿರಸಿಯಲ್ಲಿ ಹೆಚ್ಚಿನ ಮಳೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಾಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಳಸಮುದ್ರದ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆ ಕೂಡ ನೀಡಲಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆವರೆಗೆ ಸುರಿದ ಮಳೆಯಲ್ಲಿಐದು ಮನೆಗಳಿಗೆ ಹಾನಿಯಾಗಿದೆ. ಕಾರವಾರ, ಕುಮಟಾದಲ್ಲಿತಲಾ ಒಂದು ಕಾಳಜಿ ಕೇಂದ್ರ ತೆರೆಯಲಾಗಿದ್ದು, 88 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.

Heavy rains expected in coastal districts Orange alert declared.