ಬ್ರೇಕಿಂಗ್ ನ್ಯೂಸ್
28-08-24 06:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ರಾಜ್ಯಪಾಲರ ಬಗ್ಗೆ ಅವಹೇಳನ ಮಾಡಿದ ಎಂಎಲ್ಸಿ ಐವಾನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ನಗರದ ಪಿವಿಎಸ್ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ರಸ್ತೆಯಲ್ಲಿ ಕುಳಿತು ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಕ್ಕಾಗಿ ಪೊಲೀಸರು ಸಂಸದ, ಶಾಸಕರು ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ಬಸ್ಸಿನಲ್ಲಿ ಉರ್ವಾ ಠಾಣೆಗೆ ಒಯ್ದಿದ್ದಾರೆ. ನೆಲದಲ್ಲಿ ಕುಳಿತಿದ್ದ ಕಾರ್ಯಕರ್ತರನ್ನು ಎತ್ತಿ ಬಸ್ಸಿಗೆ ತುಂಬಿಸಿದ್ದಾರೆ.
ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬ್ರಿಜೇಶ್ ಚೌಟ, ರಾಜ್ಯದಲ್ಲಿ ಕಳ್ಳರು ಸೇರಿಕೊಂಡು ರಾಜ್ಯಭಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸ್ಥಿತಿ ಎಷ್ಟರಮಟ್ಟಿಗೆ ಹೋಗಿದೆ ಅಂದ್ರೆ ಕಳ್ಳರು ಕೂಡ ಪೊಲೀಸರ ಬಗ್ಗೆ ಮಾತಾಡುವ ಸ್ಥಿತಿಯಾಗಿದೆ. ರಾಜ್ಯಪಾಲರ ಅವಹೇಳನ ಮಾಡಿದ ಐವಾನ್ ಡಿಸೋಜ ವಿರುದ್ಧ ಪೊಲೀಸರು ಮೀನ ಮೇಷ ಎಣಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದರೂ, ಸಿದ್ದರಾಮಯ್ಯ ರಾಜಿನಾಮೆ ನೀಡದೆ ಮೊಂಡು ವಾದ ಮುಂದಿಡುತ್ತಿದ್ದಾರೆ ಎಂದು ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಐವಾನ್ ಡಿಸೋಜ ರಾಜ್ಯಪಾಲರಿಗೆ ಅಗೌರವ ತೋರುವ ಮೂಲಕ ಮಂಗಳೂರಿನ ಜನರನ್ನು ಅವಮಾನ ಮಾಡಿದ್ದಾರೆ. ನಾವು ಈಗಾಗಲೇ ಕಾನೂನು ಹೋರಾಟ ಎತ್ತಿಕೊಂಡಿದ್ದು ಕೋರ್ಟ್ ಸೂಚಿಸಿ ಕೇಸು ದಾಖಲಿಸಿಕೊಳ್ಳುವ ಬದಲು ಪೊಲೀಸರು ಕೇಸು ದಾಖಲಿಸಬೇಕು. ಆಡಳಿತ ಪಕ್ಷದ ಕೈಗೊಂಬೆ ರೀತಿ ವರ್ತಿಸಬಾರದು ಎಂದರು. ಪ್ರತಿಭಟನೆಯಲ್ಲಿ ಐವಾನ್ ಡಿಸೋಜ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.
Mangalore Bjp protest against Ivan Dsouza statment, BJP demands resignation of CM. The protest was held by Mlc Captian Brijesh Chowta and MLA Vedavyas Kamath, both were taken into custody by the police
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm