ಬ್ರೇಕಿಂಗ್ ನ್ಯೂಸ್
29-08-24 10:07 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸಿಟಿ ಬಸ್ ಸಂಚರಿಸುತ್ತಿದ್ದಾಗಲೇ ಚಾಲಕ (ಸುಗರ್ ಲೋ) ಅನಾರೋಗ್ಯದಿಂದ ಕುಸಿದು ಬಿದ್ದಿದ್ದು, ಎದುರಿನಲ್ಲಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿ ಸ್ವಲ್ಪದರಲ್ಲಿ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.
ಮೋರ್ಗನ್ಸ್ ಗೇಟ್- ಸ್ಟೇಟ್ ಬ್ಯಾಂಕ್ ಮಧ್ಯೆ ಸಂಚರಿಸುವ ಪಿಟಿಸಿ ಹೆಸರಿನ ಖಾಸಗಿ ಬಸ್ ಇದಾಗಿದ್ದು ಗುರುವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದಾಗ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಕುಸಿದು ಬಿದ್ದಿದ್ದಾರೆ. ಬಸ್ ಮಿಲಾಗ್ರಿಸ್ ಸ್ಟಾಪ್ ನಲ್ಲಿ ನಿಂತು ಹೊರಡುತ್ತಿದ್ದಾಗಲೇ ಘಟನೆ ನಡೆದಿದ್ದು, ಬಸ್ ನಿಧಾನ ಗತಿಯಲ್ಲಿತ್ತು. ಈ ವೇಳೆ, ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಎರಡರ ಮಧ್ಯೆ ಆಟೋ ಸಿಕ್ಕಿಕೊಂಡಿದ್ದರಿಂದ ಅಪ್ಪಚ್ಚಿಯಾಗಿದೆ. ಆದರೆ ಅದರಲ್ಲಿದ್ದ ಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ.







ಘಟನೆಯಲ್ಲಿ ಕಾರು ಮತ್ತು ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ. ಕೂಡಲೇ ಬಸ್ಸಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
Bus auto accident near state bank in Mangalore. Bus driver Kiran lobo collapsed due to low sugar and rammed an auto after which the auto was damaged completely and driver was out of danger.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm