ಬ್ರೇಕಿಂಗ್ ನ್ಯೂಸ್
29-08-24 10:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಇಲೆಕ್ಟ್ರಿಕ್ ಆಟೋ ಚಾಲಕರಿಗೆ ಜಿಲ್ಲೆಯಾದ್ಯಂತ ಸಂಚಾರಕ್ಕೆ ಅವಕಾಶ ನೀಡಿರುವುದನ್ನು ವಿರೋಧಿಸಿ ಸಿಎನ್ ಜಿ, ಪೆಟ್ರೋಲ್ ಬಳಕೆಯ ಆಟೋ ಚಾಲಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ ನೀಡಿದ್ದು, ಇ-ಆಟೋ ಓಡಾಟಕ್ಕೆ ಸಂಬಂಧಿಸಿ ಕೇಂದ್ರದ ಮಾರ್ಗಸೂಚಿ ಪ್ರಕಾರವೇ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೋಟಾರು ವಾಹನ ಕಾಯಿದೆ 66 ಪ್ರಕಾರ ಎಲ್‌ಪಿಜಿ ಮತ್ತು ಸಿಎನ್‌ಜಿ ವಾಹನಗಳಿಗೆ ಪರವಾನಗಿ ನೀಡಲಾಗಿದೆ. ಆಟೋ ರಿಕ್ಷಾಗಳ ಪರವಾನಗಿ ಅನುಮತಿ ಆಧಾರದಲ್ಲಿ ವಲಯ-1, 2 ಎಂದು ವಿಂಗಡಣೆ ಮಾಡಲಾಗಿತ್ತು. ಆದರೆ ಇತ್ತೀಚೆಗೆ ಚಾಲ್ತಿಗೆ ಬಂದ ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ಕೇಂದ್ರ ಸರಕಾರವೇ ಸೆಕ್ಷನ್ 66ರಿಂದ ವಿನಾಯಿತಿ ನೀಡಿದೆ. ಇದರಿಂದ ಸಿಎನ್‌ಜಿ ಮತ್ತು ಎಲ್‌ಪಿಜಿ ಆಟೋ ಚಾಲಕರು ಅಸಮಾಧಾನಗೊಂಡಿದ್ದಾರೆ. ಆದರೆ, ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನಷ್ಟೇ ಪಾಲನೆ ಮಾಡಿದ್ದೇವೆ ಎಂದರು.
ಈ ಬಗ್ಗೆ ಈಗಾಗಲೇ ಆಟೋ ಚಾಲಕರು ಮತ್ತು ಅವರ ವಕೀಲರು ವಿಚಾರ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಮೋಟಾರು ವಾಹನ ನೀತಿಯಂತೆ, ಮಂಗಳೂರು ನಗರ ಪೊಲೀಸರು, ಮಹಾನಗರ ಪಾಲಿಕೆಯಿಂದ ರಸ್ತೆಯ ಒತ್ತಡ, ಪಾರ್ಕಿಂಗ್ ವ್ಯವಸ್ಥೆಯ ಮಾಹಿತಿ ಪಡೆದು ಇ-ಆಟೋಗಳಿಗೆ ಅನುಮತಿ ನೀಡಲಾಗಿದೆ. ಎಲ್ಲವೂ ಕಾನೂನು ಪ್ರಕಾರವೇ ನಡೆದಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪ ಇಲ್ಲ. ಹೈಕೋರ್ಟ್ ಆದೇಶವನ್ನು ಗಮನಿಸಿಯೇ ಆದೇಶ ನೀಡಲಾಗಿದೆ. ಇಡೀ ದೇಶದಲ್ಲಿ ಇಲೆಕ್ಟ್ರಿಕ್ ಆಟೋಗಳಿಗೆ ಒಂದೇ ನಿಯಮ ಇದೆ. ವಲಯ ವಿಂಗಡಣೆ ಮಾತ್ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಇದೆ ಎಂದು ತಿಳಿಸಿದರು.
ಆಟೋ ಚಾಲಕರ ಬೇಡಿಕೆ ಕುರಿತಂತೆ ಚರ್ಚಿಸಲು ಆಟೋ ಸಂಘಟನೆಗಳೊಂದಿಗೆ ಸೆ.5ರಂದು ಸಭೆ ನಡೆಸಲಾಗುವುದು. ಜಿಲ್ಲೆಯ ಒಳಗಡೆ ವಲಯ ವಿಂಗಡಣೆ ಬೇಡ ಎಂದಾದರೆ ಅದರ ಬಗ್ಗೆ ಚರ್ಚೆ ನಡೆಸಬಹುದು. ಆದರೆ ಇ-ಆಟೋಗಳ ಕುರಿತಾಗಿ ದೇಶಾದ್ಯಂತ ಏಕರೂಪದ ಕಾನೂನು ಇರುವಾಗ ಬದಲಾವಣೆ ಮಾಡಲಾಗಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ಲಾಡ್ ಉಪಸ್ಥಿತರಿದ್ದರು.
Dakshina Kannada deputy commissioner Mullai Muhilan on Thursday, August 29 dismissed the demand by petrol, LPG, and CNG autorickshaw drivers to impose regulated zones on electric autorickshaws, stating that there is no provision for such restrictions under the existing Motor Vehicles Act (MVA) of 1988.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm