ಬ್ರೇಕಿಂಗ್ ನ್ಯೂಸ್
10-09-24 07:41 pm Mangalore Correspondent ಕರಾವಳಿ
ಪುತ್ತೂರು, ಸೆ.10: ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಎಫ್.ಐ.ಆರ್ ಮತ್ತು ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
14 ತಿಂಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 47ರ ಹರೆಯದ ಮಹಿಳೆಯೋರ್ವರು ನೀಡಿದ ದೂರಿನಂತೆ ವಾರದ ಹಿಂದೆ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ನ್ಯಾಯವಾದಿ ಪಿ.ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ ಷಡ್ಯಂತ್ರದಿಂದ ಕೂಡಿದೆ. ಸುಳ್ಳು ಆರೋಪ ಹೊರಿಸಲಾಗಿದೆ. 47 ವರ್ಷದ ಮಹಿಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ, ಅತ್ಯಾಚಾರ ಎಸಗಲಾಗಿದೆ ಎಂದು ಸುಳ್ಳು ದೂರು ನೀಡಿರುವುದಾಗಿ ವಾದಿಸಿದರು.
ಅರುಣ್ ಪುತ್ತಿಲ ಅವರೊಂದಿಗೆ ಮಹಿಳೆ ಮಾತನಾಡಿದ ಆಡಿಯೋ ಒಂದು ತಿಂಗಳ ಹಿಂದೆ ವೈರಲ್ ಆಗಿತ್ತು. ಇದರ ಬಳಿಕ ಪುತ್ತಿಲ, ಬೆಂಗಳೂರಿನ ಸಿಟಿ ನ್ಯಾಯಾಲಯದಲ್ಲಿ ಮಾನಹಾನಿಯಾಗುವ ವರದಿಗಳನ್ನು ಪ್ರಸಾರಿಸದಂತೆ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದರು. ಆನಂತರ, ಮಹಿಳೆ ಠಾಣೆಗೆ ತೆರಳಿ ದೂರು ನೀಡಿದ್ದು, ಇದೊಂದು ಸುಳ್ಳು ಆರೋಪವಾಗಿದೆ. ಪುತ್ತಿಲರ ರಾಜಕೀಯ ವಿರೋಧಿಗಳು ಈ ಕೃತ್ಯದ ಹಿಂದಿದ್ದಾರೆ ಎಂದು ಪಿ.ಪಿ.ಹೆಗ್ಡೆ ನ್ಯಾಯಪೀಠದ ಗಮನ ಸೆಳೆದಿದ್ದರು.
ಈ ಕುರಿತು ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ತಡೆ ನೀಡಬೇಕು ಎಂದು ಪುತ್ತಿಲ ಪರ ವಕೀಲರು ಕೋರಿದ್ದು ಇದನ್ನು ಮಾನ್ಯ ಮಾಡಿ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
High court holds Arun puthila sexual harassment case, lawyer argues as fake case. Puttila Parivara founder and BJP leader Arun Kumar Puthila obtained bail from a Magistrate Court in Puttur on Monday, September 2, in connection with a case of sexual harassment registered against him by the Dakshina Kannada Women Police in Puttur on Sunday, September 1.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm