ಬ್ರೇಕಿಂಗ್ ನ್ಯೂಸ್
14-09-24 09:34 pm Mangalore Correspondent ಕರಾವಳಿ
ಮಂಗಳೂರು, ಸೆ.14: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಕಾಂಗ್ರೆಸಿನಿಂದ ಸಮರ್ಥ ಗಂಡು ಹುಡುಕುತ್ತಿದ್ದೇವೆ. ನಮ್ಮಲ್ಲಿ ಚುನಾವಣೆ ಗೆಲ್ಲುವಷ್ಟು ಮತಗಳಿಲ್ಲ. ಆದರೆ ಇಂಥ ಸ್ಥಿತಿಯಲ್ಲೂ ಗೆಲ್ಲುವುದಕ್ಕಾಗಲ್ಲ ಎಂದಿಲ್ಲ. ಅಂಥ ಎದೆಗಾರಿಕೆ ಇರುವ ಸಮರ್ಥ ವ್ಯಕ್ತಿಯನ್ನು ಚುನಾವಣಾ ಕಣಕ್ಕಿಳಿಸಲು ನೋಡುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.
ವಿಧಾನ ಪರಿಷತ್ ಉಪ ಚುನಾವಣೆಗೆ ಸಿದ್ಧತೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪಕ್ಷವನ್ನು ಪುನರ್ ಸಂಘಟಿಸುವ ಉದ್ದೇಶದಿಂದ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಪ್ರಮುಖರ ಸಭೆ ನಡೆದಿದ್ದು, ಆನಂತರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷವನ್ನು ಮತ್ತೆ ಮೇಲೆತ್ತುವುದಕ್ಕಾಗಿ ಒತ್ತು ಕೊಟ್ಟಿದ್ದೇವೆ. ಅದಕ್ಕಾಗಿ ಪ್ರತಿ ಕ್ಷೇತ್ರದಲ್ಲಿ ಕಾರ್ಯಕರ್ತರ ಅಹವಾಲು ಪಡೆಯುತ್ತಿದ್ದೇವೆ. ಬ್ಲಾಕ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರ ಬದಲಾವಣೆ ಅಗತ್ಯವಿದ್ದರೆ ಅದನ್ನು ಮಾಡುತ್ತೇವೆ. ಉಪ ಚುನಾವಣೆ ಇರುವಲ್ಲಿಗೆ ಭೇಟಿ ಕೊಟ್ಟು ಮಾಹಿತಿ ಪಡೆಯುತ್ತೇವೆ. ಮಾಹಿತಿ ಸಂಗ್ರಹಿಸಿ ಪಕ್ಷದ ಹೈಕಮಾಂಡಿಗೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಸ್ಥಳೀಯಾಡಳಿತದಿಂದ ಪರಿಷತ್ತಿಗೆ ಆಯ್ಕೆಗೊಳ್ಳುವ ಇದು ದ್ವಿಸದಸ್ಯ ಕ್ಷೇತ್ರವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುತ್ತ ಬಂದಿತ್ತು. ಈ ಬಾರಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗುತ್ತಿರುವ ಒಂದು ಸ್ಥಾನಕ್ಕೆ ಚುನಾವಣೆ ಆಗುತ್ತಿದೆ. ಸಹಜವಾಗಿ ಬಿಜೆಪಿ ಕಡೆಗಿರುವ ಮತಗಳೇ ಹೆಚ್ಚಿವೆ. ಆದರೂ ರಾಷ್ಟ್ರೀಯ ಪಕ್ಷವಾಗಿದ್ದು ನಾವು ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಹೇಳಿದರು.
ವಾಲ್ಮೀಕಿ ನಿಗಮದ ಹಗರಣ ನಿಮಗೆ ಹಿನ್ನಡೆ ಆಗಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಈ ಹಗರಣ, ತನಿಖೆ ಎಲ್ಲ ಸಾಮಾನ್ಯ ಪ್ರಕ್ರಿಯೆ. ಯಾವ ಸರಕಾರ ಇದ್ದರೂ ನಡೆದುಕೊಂಡು ಹೋಗುತ್ತದೆ. ಹಿಂದೆ ಈಶ್ವರಪ್ಪ ವಿರುದ್ಧ ಸಂತೋಷ್ ಪಾಟೀಲ್ ರಾಜ್ಯಪಾಲರಿಗೆ, ಪ್ರಧಾನಿಗೆ ಎಲ್ಲರಿಗೂ ಪತ್ರ ಬರೆದು ನ್ಯಾಯ ಸಿಕ್ಕಿಲ್ಲ ಎಂದಾಗ, ಆತ್ಮಹತ್ಯೆ ಮಾಡಿಕೊಂಡಿದ್ದ. ಎಸ್ಐಟಿ ತನಿಖೆ ನಡೆಸಿ, ಈಶ್ವರಪ್ಪಗೆ ಕ್ಲೀನ್ ಚಿಟ್ ಕೊಟ್ಟಿದೆ. ವಾಲ್ಮೀಕಿ ಪ್ರಕರಣದ ಕಾರಣಕ್ಕೆ ಹಿನ್ನಡೆ ಆಗುತ್ತೆ ಎಂದುಕೊಳ್ಳಲ್ಲ ಎಂದರು. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜಿನಾಮೆ ನೀಡುವ ಪ್ರಮೇಯ ಬರಲ್ಲ. ಹೈಕೋರ್ಟಿನಲ್ಲಿ ಅಂಥ ತೀರ್ಪು ಬರಲ್ಲ ಎಂಬ ವಿಶ್ವಾಸವಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ವಸಂತ ಕುಮಾರ್, ತನ್ವೀರ್ ಸೇಠ್, ಹರೀಶ್ ಕುಮಾರ್, ಮಂಜುನಾಥ ಭಂಡಾರಿ ಮತ್ತಿತರರಿದ್ದರು.
Kpcc state secretary Chandrashekhar in Mangalore says trying for best candidate in the empty place of Kota srinivas poojary he added
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm