Mcc elections, Manoj Kumar mayor: ಮಂಗಳೂರು ಪಾಲಿಕೆ ಮೇಯರ್ ಸ್ಥಾನಕ್ಕೆ ಮನೋಜ್ ಕುಮಾರ್ ಅವಿರೋಧ ಆಯ್ಕೆ ; ಐದೂವರೆ ತಿಂಗಳಿಗೆ ಹೊಸ ಮೇಯರ್ 

19-09-24 03:39 pm       HK News Desk   ಕರಾವಳಿ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೊನೆಯ ಐದೂವರೆ ತಿಂಗಳ ಅವಧಿಗೆ   ಮೇಯರ್ ಆಗಿ ವಾರ್ಡ್ ನಂಬರ್ 17ರ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆಯಾಗಿದ್ದಾರೆ. 

ಮಂಗಳೂರು, ಸೆ.19: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೊನೆಯ ಐದೂವರೆ ತಿಂಗಳ ಅವಧಿಗೆ   ಮೇಯರ್ ಆಗಿ ವಾರ್ಡ್ ನಂಬರ್ 17ರ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆಯಾಗಿದ್ದಾರೆ. 

ಉಪ ಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್, ಉಪ ಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಮೇಯರ್ ಹುದ್ದೆಗೆ "ಎಸ್ ಸಿ" ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆ ನಡೆಯಿತು.  

ಪಾಲಿಕೆಯಲ್ಲಿ ಪ್ರಸಕ್ತ ಬಿಜೆಪಿ ಆಡಳಿತ ಮುಂದಿನ ವರ್ಷದ ಫೆಬ್ರವರಿ 27ರ ವರೆಗೆ ಇರಲಿದೆ. ಐದೂವರೆ ತಿಂಗಳು ಮಾತ್ರ ಮೇಯರ್, ಉಪ ಮೇಯರ್ ಅಧಿಕಾರಾವಧಿ ಇರಲಿದೆ. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಪಾಲಿಕೆಯ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಿರ್ವಹಿಸಿದರು. 

ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14, ಎಸ್ಡಿಪಿಐ ಇಬ್ಬರು ಸದಸ್ಯ ಬಲವನ್ನು ಹೊಂದಿದೆ.  ಚುನಾವಣೆಯಲ್ಲಿ ಸಂಸದ, ಶಾಸಕರು ಸೇರಿ 47 ಮಂದಿ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ಇತ್ತು. ಸಂಸದ ಬ್ರಿಜೇಶ್ ಚೌಟ,  ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ  ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಪಾಲಿಕೆ ಆಯುಕ್ತ ಆನಂದ್ ಉಪಸ್ಥಿತರಿದ್ದರು.

Manoj Kumar from Derebail ward was elected as the mayor of Mangaluru City Corporation (MCC) while Bhanumathi from Bolar ward was elected as the deputy mayor. The elections for the mayor, deputy mayor, and four standing committee members for the 25th term of the MCC was held on September 19 in the Mangala hall of the MCC.