ಬ್ರೇಕಿಂಗ್ ನ್ಯೂಸ್
19-09-24 09:08 pm Mangalore Correspondent ಕರಾವಳಿ
ಉಳ್ಳಾಲ, ಸೆ.19: ಕೆಎ 19-20 ಯುನೈಟೆಡ್ ಆಫ್ ರೋಡರ್ಸ್ ಆಯೋಜಿಸಿರುವ ಕುಡ್ಲ ಚಾಲೆಂಜ್ ಸೀಸನ್ -4 ಆಫ್ ರೋಡಿಂಗ್ ಸ್ಪರ್ಧೆ ಮುಡಿಪು ನವೋದಯ ಶಾಲೆಯ ನಾರ್ಯಗುತ್ತು ಕ್ರೀಡಾಂಗಣದಲ್ಲಿ ಸೆ.21 ಮತ್ತು 22 ರಂದು ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕ ಅವಿನಾಶ್ ಅಡಪ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆ.ಎ 19-20 ಯುನೈಟೆಡ್ ಆಫ್ ರೋಡರ್ಸ್ ಐದು ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು, ಈಗಾಗಲೇ 105 ವಾಹನಗಳು ಎಂಟ್ರಿ ಪಡೆದಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಂತಹ ದೊಡ್ಡಮಟ್ಟಿನ ಆಫ್ ರೋಡಿಂಗ್ ಸ್ಫರ್ಧೆ ಆಯೋಜಿಸಲಾಗಿದೆ. ಪೆಟ್ರೋಲ್ ಸ್ಟಾಕ್, ಡಿಸೀಲ್ ಸ್ಟಾಕ್, ಸೇರಿದಂತೆ ಐದು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸಾರ್ವಜನಿಕರು ಸೂಚನೆಗಳನ್ನ ಪಾಲಿಸಿ ಸ್ಫರ್ಧೆ ವೀಕ್ಷಿಸುವಂತೆ ಕೋರಿದ್ದಾರೆ.
ಸುರಕ್ಷತೆ ದೃಷ್ಟಿಯಿಂದ ಸರಕಾರದ ಎಲ್ಲ ಇಲಾಖೆಗಳ ಅನುಮತಿ ಪಡೆದುಕೊಂಡಿದ್ದು, ಅಗ್ನಿಶಾಮಕ ದಳ, ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸ್ಥಳದಲ್ಲಿ ಮೊಕ್ಕಾಂ ಹೂಡಲಿದ್ದಾರೆ. ಸ್ಕಿಲ್ಡ್ ವಾಹನಗಳಿಗೆ ಮಾತ್ರ ಅವಕಾಶವಿದ್ದು, ಸ್ಪರ್ಧಾಳುಗಳು ಸೇಫ್ಟಿ ವೆಲ್ಡ್ ರೂಲ್ ಬುಕ್ ನಲ್ಲಿರುವ ನಿಯಮಗಳನ್ನು ಕಡ್ಡಾಯ ಪಾಲಿಸಬೇಕಾಗಿದೆ. ರೋಲ್ ಗೇಜ್, ಹೆಲ್ಮೆಟ್ ಧರಿಸಿಯೇ ಟ್ರ್ಯಾಕ್ ಇಳಿಯತಕ್ಕದ್ದು. ಕರಾವಳಿ ಮೂಲದ ಖ್ಯಾತ ಆಫ್ ರೋಡರ್ ಅಶ್ವಿನ್ ನಾಯಕ್ ಸೇರಿದಂತೆ ವಿವಿಧ ರಾಜ್ಯಗಳ ಖ್ಯಾತಿಯನ್ನು ಹೊಂದಿರುವ ಆಫ್ ರೋಡರ್ ಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಮಹಿಳಾ ಕ್ಲಾಸ್ ಗೂ ಎಂಟ್ರಿ
ಮಹಿಳೆಯರಿಗೂ ಉತ್ತೇಜನ ನೀಡುವ ಸಲುವಾಗಿ ಮಹಿಳಾ ವಿಭಾಗದ ಸ್ಪರ್ಧೆ ಆಯೋಜಿಸಲಾಗಿದೆ. ಈಗಾಗಲೇ 5 ಎಂಟ್ರಿಗಳನ್ನು ಮಹಿಳೆಯರು ಪಡೆದಿದ್ದಾರೆ. 8.5 ಲಕ್ಷ ರೂ. ವೆಚ್ಚದಲ್ಲಿ ವಿಜೇತರಿಗೆ ನಗದು ಪುರಸ್ಕಾರ ನೀಡಲಿದ್ದೇವೆ. ಜೊತೆಯಲ್ಲಿ ಸರ್ಫಿಂಗ್, ಕಯಾಕಿಂಗ್ ನಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶದಿಂದ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಎರಡು ದಿನ ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಸ್ಪರ್ಧೆ ಆಯೋಜಿಸಲಾಗಿದ್ದು, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ನಾಸೀರ್ ನಡುಪದವು, ವಿಜೇಶ್ ನಾಯ್ಕ್, ಖುಷಿತ್ ಕುಮಾರ್ ಉಪಸ್ಥಿತರಿದ್ದರು.
Kudla challenge season 4 competition for off roading in Mangalore on September 21 and 22. It is said to be India’s first event.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm