ಬ್ರೇಕಿಂಗ್ ನ್ಯೂಸ್
19-09-24 10:38 pm Mangalore Correspondent ಕರಾವಳಿ
ಮಂಗಳೂರು, ಸೆ.19: ಗುತ್ತಿಗೆದಾರರ ಬಳಿ ಲಂಚ ಕೇಳಿ ಹಣವನ್ನು ಪಡೆಯುತ್ತಿದ್ದಾಗಲೇ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ನಾಗರಾಜು ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೂರುದಾರರು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರರಾಗಿದ್ದು, 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ರೂ. 9,77,154 ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರಲ್ಲಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ. 37,000 ಲಂಚ ನೀಡುವಂತೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿಯವರಿಗೆ ರೂ. 15,000 ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು.
ಜೂನಿಯರ್ ಇಂಜಿನಿಯರ್ ನಾಗರಾಜು ಅವರು ಮುಂಚಿತವಾಗಿ ರೂ 7,000/- ಹಣವನ್ನು ದೂರುದಾರರಿಂದ ಪಡೆದಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರು ರೂ.30,000 ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿ ರೂ.15,000 ಲಂಚದ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Mangalore Kinnigoli Engineer and Superintendent caught asking for bribe from contractor, arrested by lokayukta. The arrested have been identified as M R Swami and Panchyath Junior engineer Nagaraju.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm