ಬ್ರೇಕಿಂಗ್ ನ್ಯೂಸ್
20-09-24 06:56 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮಂಗಳೂರು ನಗರದ ಹೃದಯಭಾಗ ಎನಿಸಿರುವ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ವೃತ್ತ ನಿರ್ಮಾಣದ ಪ್ರಾಯೋಜಕತ್ವ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಬಂದಿದೆ. ಬ್ಯಾಂಕಿನ ಸಿಇಓ ಮತ್ತು ಆಡಳಿತ ನಿರ್ದೇಶಕರಾಗಿರುವ ಎ. ಮಣಿಮೇಖಲೈ ಅವರು 75 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರು ಇತ್ತೀಚೆಗೆ ಪ್ರತಿಮೆ ಮತ್ತು ಅಂಬೇಡ್ಕರ್ ವೃತ್ತದ ನೂತನ ನಕ್ಷೆಯನ್ನು ಬ್ಯಾಂಕಿನ ಸಿಇಓ ಮಣಿಮೇಖಲೈ ಅವರಿಗೆ ನೀಡುವ ಮೂಲಕ ಪ್ರತಿಮೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನಿರ್ವಹಿಸುವ ಮೂಲಕ ಮುಂದಿನ ಡಿಸೆಂಬರ್ ಒಳಗಡೆ ಉದ್ಘಾಟನೆ ಮಾಡಲು ಅವಕಾಶ ಮಾಡುವಂತೆ ಮೇಯರ್, ಬ್ಯಾಂಕಿನ ಸಿಇಓ ಅವರಲ್ಲಿ ಕೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣಚಂದ್ರ ಆಳ್ವ, ಕಾರ್ಪೊರೇಟರ್ ವಿನಯರಾಜ್, ಮಾಜಿ ಶಾಸಕ ಜೆ.ಆರ್ ಲೋಬೊ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಲಯ ಮುಖ್ಯಸ್ಥೆ ರೇಣು ನಾಯರ್, ಡಿಜಿಎಂ ರಾಜಮಣಿ, ಎಜಿಎಂ ಎನ್. ಗೋಪಿನಾಥ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧಪಡಿಸಿದ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಉಪಸ್ಥಿತರಿದ್ದರು.
Mangalore CEO of Union Bank of India unveiled construction work of New Ambedkar Circle. MD & CEO of Union Bank of India Ms. A Manimekhalai unveiled the curtain of construction work of New Ambedkar Circle at the proposed junction in Mangalore , recently.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm