Dasara 2024 School holiday; ಈ ಬಾರಿ ಅ.3ರಿಂದ 20ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಣೆ ; ಕರಾವಳಿಗೆ ಬದಲಾವಣೆ ಇಲ್ಲ 

21-09-24 01:15 pm       HK News Desk   ಕರಾವಳಿ

ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್​ 3ರಿಂದ 20ರ ತನಕ ದಸರಾ ರಜೆ ಘೋಷಿಸಿದೆ. ಈ ಹಿಂದೆ ದಸರಾ ರಜೆ ವಿಳಂಬ ಆಗುತ್ತಿದ್ದರಿಂದ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಮಾಡಿಲ್ಲ. 

ಬೆಂಗಳೂರು, ಸೆ.21: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಸರ್ಕಾರಿ, ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್​ 3ರಿಂದ 20ರ ತನಕ ದಸರಾ ರಜೆ ಘೋಷಿಸಿದೆ. ಈ ಹಿಂದೆ ದಸರಾ ರಜೆ ವಿಳಂಬ ಆಗುತ್ತಿದ್ದರಿಂದ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಮಾಡಿಲ್ಲ. 

ಕರ್ನಾಟಕ ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿತ್ತು. ಮೊದಲ ಅವಧಿ ಅಕ್ಟೋಬರ್​​ 2ರ ತನಕ ಇರುತ್ತದೆ. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆ ಶುರುವಾಗಿ ತಿಂಗಳ ಕೊನೆಯ ವರೆಗೆ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಶುರುವಾಗಲಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳು ರಜೆಯ ಮಜಾ ಕಳೆಯಲಿದ್ದಾರೆ.

ಅಕ್ಟೋಬರ್​ 3ರಿಂದ 20ರ ತನಕ ಅಂದರೆ 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್​​ 21ರಿಂದ 2ನೇ ಅವಧಿ ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

Dasara 2024 holidays announced for Karnataka government school, holiday from October 3 to 20