ಬ್ರೇಕಿಂಗ್ ನ್ಯೂಸ್
24-09-24 10:16 pm Mangalore Correspondent ಕರಾವಳಿ
ಸುಳ್ಯ, ಸೆ.24: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಆಗಮಿಸಿದ್ದಾಗ ಆಸ್ಪತ್ರೆಯ ಇಬ್ಬರು ವೈದ್ಯರು ಅಗೌರವದಿಂದ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಧೀಶರು ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.
ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿದ್ದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.
ತಾವು ಆಸ್ಪತ್ರೆಗೆ ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಯುವತಿಯ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಕರ್ತವ್ಯದಲ್ಲಿದ್ದ ವೈದ್ಯರು ಅದನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದಾರೆ ಎಂಬುದಾಗಿ ತನಗೆ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಬೇರೇನು ನಡೆದಿದೆ ಎಂಬ ಕುರಿತು ವರದಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Kasaragod Judge reports of disrespect shown by doctors during visit to Sullia hospital.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm