ಬ್ರೇಕಿಂಗ್ ನ್ಯೂಸ್
26-09-24 07:36 pm Mangalore Correspondent ಕರಾವಳಿ
ಮಂಗಳೂರು, ಸೆ.26: ಹೈಕೋರ್ಟ್ ತೀರ್ಪು ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ. ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡುವ ಅಗತ್ಯವೂ ಇಲ್ಲ. ಇಡೀ ರಾಜ್ಯ ಕಾಂಗ್ರೆಸ್ ಸಿದ್ದರಾಮಯ್ಯ ಅವರ ಜತೆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಂಜುನಾಥ ಭಂಡಾರಿ, ಸಿಎಂ ರಾಜೀನಾಮೆ ವಿಚಾರದಲ್ಲಿ ಬಿಜೆಪಿಗೊಂದು ನ್ಯಾಯ, ಕಾಂಗ್ರೆಸ್‌ಗೊಂದು ನ್ಯಾಯವೇ ಎಂದು ಪ್ರಶ್ನಿಸಿದರು. 2010ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಚೆಕ್‌ನಲ್ಲಿ ಲಂಚ ಸ್ವೀಕಾರ ಮತ್ತು ಎರಡು ಡಿನೋಟಿಫಿಕೇಶನ್ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರು. 2011ರಲ್ಲಿ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದರೂ ಯಡಿಯೂರಪ್ಪ ರಾಜೀನಾಮೆ ನೀಡಿರಲಿಲ್ಲ. ಲೋಕಾಯುಕ್ತ ತನಿಖೆಯ ಬಳಿಕ ತಪ್ಪಿತಸ್ಥ ಎಂದು ಘೋಷಿಸಿದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯಡಿಯೂರಪ್ಪ ಅವರು ಚೆಕ್ ಮೂಲಕ ಹಣ ಪಡೆದಿದ್ದರೆ, ಸಿದ್ದರಾಮಯ್ಯ ಅವರು ಮೂಡಾ ಪ್ರಕರಣದಲ್ಲಿ ನೇರವಾಗಿ ಭಾಗಿಯೇ ಆಗಿಲ್ಲ. ಕೇವಲ ರಾಜಕೀಯ ಕಾರಣಕ್ಕೆ ಆರೋಪ ಮಾಡಿದ ಮಾತ್ರಕ್ಕೆ ರಾಜೀನಾಮೆ ನೀಡುವ ಅಗತ್ಯ ಬರಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್‌ಗೆ ಹೈಕೋರ್ಟ್ ಅನುಮತಿ ನೀಡಿದೆ. ಇದರ ವಿರುದ್ಧ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಜೊತೆ ರಾಜ್ಯದ ಜನತೆ, ಇಡೀ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ. ಸಿದ್ದರಾಮಯ್ಯ ಮೇಲೆ ಕಳಂಕ ತರುವ ಪ್ರಯತ್ನದಲ್ಲಿ ಬಿಜೆಪಿಗರು ಸಫಲರಾಗಲ್ಲ. ಎಷ್ಟೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿಜೆಪಿಗೆ ರಾಜೀನಾಮೆ ಕೇಳುವ ನೈತಿಕ ಹಕ್ಕೇ ಇಲ್ಲ ಎಂದರು.
ದೋಸ್ತಿಗಳ ಷಡ್ಯಂತ್ರ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಸಿದ್ದರಾಮಯ್ಯ ಜೀವನದಲ್ಲಿ ಭ್ರಷ್ಟಾಚಾರದ ಯಾವುದೇ ಕಪ್ಪು ಚುಕ್ಕೆ ಹೊಂದಿಲ್ಲ. ಈಗ ಆರೋಪ ಮಾಡುತ್ತಿರುವುದು ಬಿಜೆಪಿ, ಜೆಡಿಎಸ್ ದೋಸ್ತಿಗಳ ಷಡ್ಯಂತ್ರ. ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟದ್ದು ಯಾವುದೇ ತನಿಖಾ ಸಂಸ್ಥೆಯಾಗಲೀ, ಪೊಲೀಸರಾಗಲೀ ಅಲ್ಲ. ಬದಲಾಗಿ ಮೂವರು ಖಾಸಗಿ ವ್ಯಕ್ತಿಗಳು. ಅದರಲ್ಲಿ ಇಬ್ಬರು ಬ್ಲ್ಯಾಕ್ ಮೇಲ್ ಮಾಡುವವರಾಗಿದ್ದರೆ, ಒಬ್ಬರು ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡವರು. ಇಂಥವರ ದೂರಿನ ಆಧಾರದಲ್ಲಿ ಕ್ರಮ ಕೈಗೊಳ್ಳುವುದು ಎಷ್ಟು ಸರಿ? ಬಿಜೆಪಿಯಲ್ಲಿ ಬಹುತೇಕರು ಒಂದಲ್ಲ ಒಂದು ಕೇಸ್‌ನಲ್ಲಿ ಇರುವವರು. ಆರೋಪ ಮಾಡಲು ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಮುಖಂಡರಾದ ಪದ್ಮರಾಜ್ ಆರ್., ಶಾಲೆಟ್ ಪಿಂಟೊ, ಶುಭೋದಯ ಆಳ್ವ, ಮನೋರಾಜ್ ರಾಜೀವ, ಟಿ.ಕೆ. ಸುಧೀರ್, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ ಮತ್ತಿತರರಿದ್ದರು.
Bjp Patty filled with corruption has no right to demand resignation of CM Siddaramaiah says Manjunath bhandary in Mangalore.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm