ಬ್ರೇಕಿಂಗ್ ನ್ಯೂಸ್
01-10-24 03:26 pm Mangalore Correspondent ಕರಾವಳಿ
ಮಂಗಳೂರು, ಅ.1: ಹಿರಿಯ ನಾಗರಿಕರ ದಿನಾಚರಣೆಯ ದಿನದಂದೇ ನಿವೃತ್ತ ಸರಕಾರಿ ನೌಕರರನ್ನು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ನಾವೇನೂ ಸಾಲ ಕೇಳ್ತಾ ಇಲ್ಲ. ಸುದೀರ್ಘ ವರ್ಷ ಸರಕಾರಿ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎನ್ನುವುದು ನಮ್ಮ ಕಳಕಳಿ ಎಂದು ನಿವೃತ್ತ ಸರಕಾರಿ ನೌಕರರ ವೇದಿಕೆಯ ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.
ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂಭಾಗದಲ್ಲಿ ವೇದಿಕೆಯ ವತಿಯಿಂದ ಏರ್ಪಡಿಸಲಾದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. 2022ರ ಜುಲೈ1ರಿಂದ 2024ರ ಜುಲೈ1ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಈ ಬಗ್ಗೆ ಪರಿಷ್ಕೃತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಿದರು.
ರಾಜ್ಯವ್ಯಾಪಿ ಪ್ರತಿಭಟನೆ, ಸತ್ಯಾಗ್ರಹ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನಸೌಧ ತನಕ ಪಾದಯಾತ್ರೆ ನಡೆಸುತ್ತೇವೆ. ಸರಕಾರ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.
ಕೋವಿಡ್ ಸಮಯದಲ್ಲಿ ತುರ್ತು ಸೇವೆಗಳನ್ನು ಮಾಡಿದವರು ಸರಕಾರಿ ನೌಕರರು. ಈಗಾಗಲೇ ನಮ್ಮ ಬೇಡಿಕೆಗಳ ಬಗ್ಗೆ ತಹಸೀಲ್ದಾರ್ ಮೂಲಕ ಆರ್ಥಿಕ ಇಲಾಖೆಯ ವರೆಗೂ ಗಮನ ಸೆಳೆದಿದ್ದೇವೆ. ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯವ್ಯಾಪಿ ಇಂದು ನಿವೃತ್ತ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವ ಸ್ಥಿತಿಯಾಗಿದೆ ಎಂದು ಸಿರಿಲ್ ರಾಬರ್ಟ್ ಡಿಸೋಜ ಹೇಳಿದರು.
ಜಿಲ್ಲಾ ಸಂಚಾಲಕ ಸ್ಟ್ಯಾನಿ ತಾವ್ರೋ ಮಾತನಾಡಿ, ನಿವೃತ್ತ ಸರಕಾರಿ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವಂತಾಗಿದ್ದು ವಿಷಾದನೀಯ. ಸರಕಾರ ಇದನ್ನು ಗಂಭೀರ ಪರಿಗಣಿಸಿ ನ್ಯಾಯ ಕೊಡಬೇಕು ಎಂದರು.
ನಿವೃತ್ತ ಹಿರಿಯ ಸರಕಾರಿ ನೌಕರ ವಿಠಲ ಶೆಟ್ಟಿಗಾರ್ ಮಾತನಾಡಿ, ನಾನು ನಿವೃತ್ತನಾಗಿ ಬಹಳ ವರ್ಷ ಆಗಿದೆ. ಆದರೆ ನಿವೃತ್ತ ಸರಕಾರಿ ನೌಕರರಿಗೆ ಅನ್ಯಾಯವಾಗುತ್ತಿರುವುದನ್ನು ನೋಡಿ ಸುಮ್ಮನಿರಲು ಸಾಧ್ಯವಾಗದೇ ಪ್ರತಿಭಟನೆಗೆ ಬಂದಿದ್ದೇನೆ ಎಂದರು.
ಸಂಚಾಲಕಿ ಮಂಜುಳಾ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪ್ರತಿಭಟನೆಯ ಬಳಿಕ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿರಿಯ ಸರಕಾರಿ ನೌಕರರಾದ ವಿಜಯ ಪೈ, ಮೋಹನ ಬಂಗೇರ, ಎನ್. ಆನಂದ ನಾಯ್ಕ್, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರು ಉಪಸ್ಥಿತರಿದ್ದರು.
Retired government employees protest in Mangalore, warning of hunger strike on Senior Citizens Day.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm