ಬ್ರೇಕಿಂಗ್ ನ್ಯೂಸ್
01-10-24 05:35 pm Mangalore Correspondent ಕರಾವಳಿ
ಮಂಗಳೂರು, ಅ.1: ದಕ್ಷಿಣ ಕನ್ನಡ – ಉಡುಪಿ ಸ್ಥಳೀಯಾಡಳಿತ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಗೊಳ್ಳುವ ಉಪ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಚ್ಚರಿ ಅಭ್ಯರ್ಥಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಕಿಶೋರ್ ಕುಮಾರ್ ಬೊಟ್ಯಾಡಿ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ.
ನಾಮಪತ್ರ ಸಲ್ಲಿಸಲು ಎರಡು ದಿನ ಇರುವಾಗ ಕಿಶೋರ್ ಕುಮಾರ್ ಹೆಸರು ಘೋಷಣೆ ಮಾಡಿದ್ದು ಬಿಜೆಪಿ ಒಳಗಡೆಯೇ ಅಚ್ಚರಿ ಮೂಡಿಸಿದೆ. ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ಸ್ಥಾನಕ್ಕೆ ಅ.21ರಂದು ಉಪ ಚುನಾವಣೆ ನಡೆಯುತ್ತಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೆಸರು ಮುಂಚೂಣಿಯಲ್ಲಿತ್ತು. ಸೋಮವಾರ ಬಹುತೇಕ ನಳಿನ್ ಕುಮಾರ್ ಹೆಸರು ಅಂತಿಮಗೊಂಡಿದೆ ಎನ್ನುವ ಸುದ್ದಿಯೇ ಮಂಗಳೂರಿನ ಬಿಜೆಪಿ ಒಳಗಡೆ ಹರಡಿತ್ತು. ನಳಿನ್ ಕಡೆಯವರು ಮಂಗಳೂರಿನಲ್ಲಿ ನಾಮಪತ್ರ ರೆಡಿ ಮಾಡಿಸುವುದಕ್ಕೂ ಸೂಚನೆ ನೀಡಿದ್ದರು.
ಆದರೆ ಬಿಜೆಪಿ ಹೈಕಮಾಂಡಿನಿಂದ ಇಂದು ಹೆಸರು ಘೋಷಣೆಯಾಗಿದ್ದು ಅಚ್ಚರಿ ಎನ್ನುವಂತೆ ಬಿಜೆಪಿಯಲ್ಲಿ ಸುದೀರ್ಘ ಅವಧಿಯಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದ ಕಿಶೋರ್ ಕುಮಾರ್ ಪುತ್ತೂರು ಜಾಕ್ ಪಾಟ್ ಹೊಡೆದಿದ್ದಾರೆ. ಕಳೆದ ಬಾರಿ ಪುತ್ತೂರಿನಲ್ಲಿ ಕಿಶೋರ್ ಕುಮಾರ್ ವಿಧಾನಸಭೆ ಅಭ್ಯರ್ಥಿಯಾಗುತ್ತಾರೆ ಎನ್ನುವ ಸುದ್ದಿಯಿತ್ತು. ಆದರೆ, ಕೊನೆಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. ಟಿಕೆಟ್ ಸಿಕ್ಕಿಲ್ಲವೆಂದು ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧಿಸಿದಾಗ, ಕಿಶೋರ್ ಕುಮಾರ್ ಮತ್ತು ಪಟಾಲಂ ಬಿಜೆಪಿ ಪರವಾಗಿ ನಿಂತಿತ್ತು. ಆದರೆ ನಳಿನ್ ಕುಮಾರ್ ವಿರೋಧಿ ಅಲೆ ಮತ್ತು ಬಿಜೆಪಿ ನಾಯಕರ ಕುರಿತ ವಿರೋಧಾಭಿಪ್ರಾಯದಿಂದಾಗಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಇದರಿಂದ ಕಿಶೋರ್ ಕುಮಾರ್ ಆದಿಯಾಗಿ ಬಿಜೆಪಿ ಪರ ನಿಂತವರು ತೀವ್ರ ಮುಖಭಂಗ ಅನುಭವಿಸಿದ್ದರು.
ಈ ಬಾರಿ ಕೋಟರಿಂದ ತೆರವಾದ ಸ್ಥಾನಕ್ಕೆ ಅರುಣ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಆರಂಭದಲ್ಲಿತ್ತು. ಇದರ ನಡುವಲ್ಲೇ ಅರುಣ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದು ಅವರ ಹೆಸರನ್ನು ಮರೆಗೆ ಸರಿಸಿತ್ತು. ಕಳೆದ ಒಂದು ವಾರದಿಂದ ದೆಹಲಿಯಲ್ಲೇ ಬೀಡು ಬಿಟ್ಟು ಟಿಕೆಟಿಗಾಗಿ ಕಸರತ್ತು ನಡೆಸಿದ್ದ ನಳಿನ್ ಕುಮಾರ್ ಈ ಬಾರಿ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಬಿಲ್ಲವ ಕೋಟಾದಿಂದ ಸತೀಶ್ ಕುಂಪಲ ಹೆಸರೂ ಕೇಳಿಬಂದಿತ್ತು. ಆದರೆ, ಕೊನೆಕ್ಷಣದಲ್ಲಿ ಕಿಶೋರ್ ಕುಮಾರ್ ಜಾಕ್ ಪಾಟ್ ಹೊಡೆದಿದ್ದಾರೆ.
BJP surprise candidate for vidhana parishad DK and Udupi, Kishor Puttur selected, Nalin kateel looses ticket. There were specualtions that Nalin or kateel name will be announced as candidates but shockingly Kishor Puttur has been selected as BJP candidate.
04-10-24 09:18 pm
HK News Desk
ಬೆಂಗಳೂರು ; 3 ಪ್ರತಿಷ್ಠಿತ ಕಾಲೇಜುಗಳಿಗೆ ಹುಸಿ ಬಾಂ...
04-10-24 08:25 pm
Dinesh Gundu Rao, Savarkar: ಸಾವರ್ಕರ್ ಮಾಂಸಾಹಾರ...
04-10-24 12:38 pm
Vijay Tata, HD Kumaraswamy, Ramesh Gowda: ಚನ್...
04-10-24 12:02 pm
Lawyer Jagadish, Big Boss Kannada: ಬಿಗ್ ಬಾಸ್...
03-10-24 08:37 pm
05-10-24 06:40 pm
HK News Desk
Tirupati laddu row, CBI: ತಿರುಪತಿ ಲಡ್ಡಿನಲ್ಲಿ ಕ...
04-10-24 07:10 pm
Isha foundation raid, Court: ಇಶಾ ಫೌಂಡೇಶನ್ ಆಶ್...
02-10-24 02:10 pm
Israel-Iran war: ಇಸ್ರೇಲ್ ಮೇಲೆ ಮುಗಿಬಿದ್ದ ಇರಾನ್...
02-10-24 11:43 am
Fire in Thailand: ಥಾಯ್ಲೆಂಡ್ ; ಸ್ಕೂಲ್ ಬಸ್ ಟಯರ...
01-10-24 07:36 pm
05-10-24 10:54 pm
Mangalore Correspondent
Mangalore crime, Arun Ullal: ಬೇರೆಯವರ ಹಾಲ್ ಗಳಲ...
05-10-24 10:06 pm
Mangalore Pradeep Acharya, powerlifting: ಕಾಮನ...
05-10-24 07:11 pm
Mangalore News, Israel Travels Bus: ಇಸ್ರೇಲ್ ಟ...
05-10-24 04:42 pm
Nalin Kateel, Mangalore: ನಮ್ಮನ್ನು 40 ಪರ್ಸೆಂಟ್...
05-10-24 03:54 pm
05-10-24 08:26 pm
Mangalore Correspondent
ಬೆಂಗಳೂರು ಏರ್ಪೋರ್ಟಲ್ಲಿ ಸಿಕ್ಕಿಬಿದ್ದಿದ್ದೇನೆ, ದೊಡ...
03-10-24 10:49 pm
BMTC Conductor Stabbed, Bangalore crime; ಫುಟ್...
02-10-24 05:44 pm
CCB Mangalore Police, Drugs: ತಲಪಾಡಿ ಗಡಿಭಾಗದಲ್...
02-10-24 04:45 pm
Vardhman Group, Digital Arrest, Fraud; ವರ್ಧಮಾ...
02-10-24 04:03 pm