ಬ್ರೇಕಿಂಗ್ ನ್ಯೂಸ್
02-10-24 10:06 pm Mangalore Correspondent ಕರಾವಳಿ
ಮಂಗಳೂರು, ಅ.2: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ ಮಾಜಿ ಜಿಪಂ ಅಧ್ಯಕ್ಷ ಬೈಂದೂರಿನ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಿದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯಂತೆ ರಾಜು ಪೂಜಾರಿ ಹೆಸರನ್ನು ಪ್ರಕಟಿಸುತ್ತಿರುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ. ಮರವಂತೆ ಗ್ರಾಪಂ ಸದಸ್ಯರಾಗಿ, ಬಳಿಕ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ ಆನಂತರ ಜಿಪಂ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜು ಪೂಜಾರಿ ಅವರು ಒಂದು ಬಾರಿ ಜಿಪಂ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿದ್ದ, ತಾಲೂಕು ಕೃಷ್ಯುತ್ಪನ್ನ ಸಹಕಾರಿ ಸಂಘ, ಹಾಲು ಉತ್ಪಾದಕರ ಸಹಕಾರಿ ಸಂಘ, ಕುಂದಾಪುರ ತಾಲೂಕು ಸಹಕಾರಿ ಯೂನಿಯನ್ ನಿರ್ದೇಶಕರು, ಮರವಂತೆ ಬಡಾಕೆರೆ ವ್ಯವಸಾಯ ಸಹಕಾರಿ ಸಂಘ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿರುವ ರಾಜು ಪೂಜಾರಿ ಕಳೆದ ಬಾರಿ ಬೈಂದೂರು, ಕುಂದಾಪುರದಲ್ಲಿ ಶಾಸಕ ಸ್ಥಾನಕ್ಕೂ ಟಿಕೆಟ್ ಗಿಟ್ಟಿಸಲು ಪ್ರಯತ್ನ ಪಟ್ಟಿದ್ದರು. ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯಿಂದಾಗಿ ಕುಂದಾಪುರ, ಉಡುಪಿ ಭಾಗದಲ್ಲಿ ರಾಜು ಪೂಜಾರಿ ಜನಪ್ರಿಯರಾಗಿದ್ದಾರೆ.
ಈ ಬಾರಿ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗುತ್ತಿರುವ ವಿಧಾನ ಪರಿಷತ್ ಸ್ಥಾನಕ್ಕೆ ಅ.21ರಂದು ಉಪ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸಿನಿಂದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಯುಬಿ ಶೆಟ್ಟಿ, ಹರಿಪ್ರಸಾದ್ ರೈ ಸೇರಿದಂತೆ ಹಲವರು ಟಿಕೆಟ್ ಪಡೆಯಲು ಆಕಾಂಕ್ಷಿಗಳಾಗಿದ್ದರು. ಗುತ್ತಿಗೆದಾರರಾದ ಉದಯ ಕುಮಾರ್ ಶೆಟ್ಟಿ, ಯು.ಬಿ. ಶೆಟ್ಟಿ ಟಿಕೆಟ್ ಗಿಟ್ಟಿಸುತ್ತಾರೆಯೇ ಎನ್ನುವ ಕುತೂಹಲ ಇತ್ತು. ಬಿಜೆಪಿಯಿಂದ ಈಗಾಗಲೇ ಕಿಶೋರ್ ಕುಮಾರ್ ಪುತ್ತೂರು ಅವರ ಹೆಸರು ಘೋಷಿಸಿದ್ದು, ಅ.3 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ.
ಸ್ಥಳೀಯಾಡಳಿತ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯರು ಹೆಚ್ಚಿರುವುದರಿಂದ ಅಲ್ಲಿನ ಮತಗಳನ್ನು ಬಾಚಬಲ್ಲ ಪ್ರಭಾವಿ ವ್ಯಕ್ತಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ಸರಿಯಾದ ವ್ಯಕ್ತಿ ಸಿಗದ ಕಾರಣ ನಾಮ್ಕೇವಾಸ್ತೆ ಅಭ್ಯರ್ಥಿ ಘೋಷಣೆ ಮಾಡಿದೆ. ಸಿರಿವಂತ ಯು.ಬಿ. ಶೆಟ್ಟಿ ಅಥವಾ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಆಗುತ್ತಾರೆಯೇ ಎನ್ನುವ ಕುತೂಹಲ ಇತ್ತು. ಪ್ರಭಾವಿ ಅಭ್ಯರ್ಥಿಯಾಗಿ, ಹಣ ಚೆಲ್ಲುವ ಮೂಲಕ ಎದುರಾಳಿ ಪಕ್ಷದ ಮತಗಳನ್ನು ಸೆಳೆಯುವ ತಾಕತ್ತಿದ್ದರೆ, ಚುನಾವಣೆ ಸ್ವಲ್ಪ ರಂಗೇರುವ ಸಾಧ್ಯತೆಯಿತ್ತು. ಈಗಿನ ಕಣ ನೋಡಿದರೆ ಅಂತಹ ಕುತೂಹಲ ಉಳಿದಿಲ್ಲ.
Raju poojari nominated as congress candidate from Dakshina Kannada for vidhana parishad elections 2024.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm