ಬ್ರೇಕಿಂಗ್ ನ್ಯೂಸ್
08-10-24 01:18 pm Mangalore Correspondent ಕರಾವಳಿ
ಮಂಗಳೂರು, ಅ.8: ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ, ಎಸ್ಪಿ, ಡಿಸಿ ಕಚೇರಿ ಎದುರು ಧರಣಿ ನಡೆಸುದಾಗಿ ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಸಮಿತಿ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಸಮಿತಿ ಅಧ್ಯಕ್ಷ ಆಲ್ವಿನ್ ಜೆರೊಮ್ ಡಿಸೋಜ ಪಾನೀರ್ ಇವರ ಮೇಲೆ ದಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಆಸ್ಪತ್ರೆ ದಾಖಲಾಗಿದ್ದಾರೆ. ಆಲ್ವಿನ್ ಅವರು ಉಳಿಯ ಪಾವೂರು, ರಾಣಿಪುರ, ಉಳ್ಳಾಲ ಹೊಯ್ಗೆ, 62ನೇ ತೋಕೂರು ಕೆಂಜಾರು ಈ ಪ್ರದೇಶಗಳ ದ್ವೀಪಗಳನ್ನು ಉಳಿಸುವ ಉದ್ದೇಶದಿಂದ ಸೆ.27ರಂದು ನಡೆಸಿದ ಬೃಹತ್ ಪ್ರತಿಭಟನೆಯ ಫಲವಾಗಿ ಶಾಂತಿ ಪ್ರಿಯರಾದ ನಮಗೆ ಸಿಕ್ಕ ಕಾಣಿಕೆಯಂತಾಗಿದೆ.
ಪ್ರಕೃತಿಯನ್ನು ನಾಶಗೊಳಿಸುವವರ ವಿರುದ್ಧ ನಮ್ಮ ಮೇಲೆ ಇನ್ನೆಷ್ಟು ಹಲ್ಲೆ ನಡೆಸಿದರೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ. ಆಲ್ವಿನ್ ಡಿಸೋಜರವರ ಮೇಲೆ ನಡೆಸಿರುವ ಮಾರಣಾಂತಿಕ ಹಲ್ಲೆ ಘಟನೆ ನಮ್ಮೆಲ್ಲರಿಗೂ ಅತೀವ ನೋವು ತಂದಿದೆ ಹಾಗೂ ನಮ್ಮನ್ನು ಭಯಭೀತರನ್ನಾಗಿಸಿದೆ. ಮುಂದಿನ 24 ಗಂಟೆಗಳ ಒಳಗೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯ ಸಿಗುವವರೆಗೆ ವಾಮಂಜೂರು ಗ್ರಾಮಾಂತರ ಪೋಲಿಸ್ ಠಾಣೆಯ ಮುಂದೆ ಪ್ರತಿಭಟನೆ ಕೈಗೊಳ್ಳಲಿದ್ದೇವೆ ಎಂದವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕ ಫಾ. ಜೆ.ಬಿ. ಸಲ್ಡಾನ್ಹಾ, ಮಾಜಿ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೋಸ್ತಾ, ನಿಕಟ ಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಪ್ರಶಾಂತ್ ಮೊಂತೇರೊ, ಸಾಮಾಜಿಕ ಹೋರಾಟಗಾರ ಸುನಿಲ್ ಕುಮಾರ್ ಬಜಾಲ್, ಪಾವೂರು ಉಳಿಯ ದ್ವೀಪ ನಿವಾಸಿ ಗಿಲ್ಬರ್ಟ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
Catholic Sabha threatens of protest in front of Police Commissioner office in Mangalore for attack on Alwyn dSouza. Members of Catholic Sabha, Mangaluru, on Monday, October 7, threatened to stage a protest in front of the Police Commissioner’s office if the city police did not arrest all persons behind the assault on the sabha’s president Alwyn Jerome D’Souza on the outskirts of the city on October 5.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm