ಬ್ರೇಕಿಂಗ್ ನ್ಯೂಸ್
08-10-24 05:20 pm Mangalore Correspondent ಕರಾವಳಿ
ಮಂಗಳೂರು, ಅ.8: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ ಪತಿ ಮತ್ತು ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಸೇರಿದಂತೆ ಎರಡು ವಿಶೇಷ ತಂಡ ತನಿಖೆ ಆರಂಭಿಸಿದ್ದಾರೆ. ಪ್ರಕರಣ ಸಂಬಂಧಿಸಿ ಪೊಲೀಸರು ಆಯೆಷಾ ರೆಹ್ಮತ್ ಮತ್ತು ಆಕೆಯ ಪತಿ ಶೋಯಿಬ್ ಹಾಗೂ ಸಿರಾಜ್ ಎಂಬವರನ್ನು ಕಲ್ಲಡ್ಕದಲ್ಲಿ ಬಂಧಿಸಿದ್ದಾಗಿ ತಿಳಿದುಬಂದಿದೆ. ಇದೇ ವೇಳೆ, ಅಬ್ದುಲ್ ಸತ್ತಾರ್ ಮತ್ತು ಶಾಫಿ ನಂದಾವರ ಸೇರಿದಂತೆ ಇತರ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಆಯೆಷಾ ರೆಹ್ಮತ್, ಮುಮ್ತಾಜ್ ಆಲಿಯವರು ನಡೆಸುತ್ತಿದ್ದ ಕಾಲೇಜಿನಲ್ಲಿ ಕೆಲಸಕ್ಕಿದ್ದ ಮಹಿಳೆ. ಈ ವೇಳೆ, ಮುಮ್ತಾಜ್ ಆಲಿಯವರ ಜೊತೆಗೆ ಹತ್ತಿರದ ಒಡನಾಟ ಇರಿಸಿಕೊಂಡಿದ್ದರು ಎನ್ನಲಾಗಿದೆ. ಇದೇ ನೆಪದಲ್ಲಿ ಆರೋಪಿ ಮಹಿಳೆ, ಮುಮ್ತಾಜ್ ಆಲಿಯವರನ್ನು ಬ್ಲಾಕ್ಮೇಲ್ ಮಾಡಲು ಮುಂದಾಗಿದ್ದು ಇದಕ್ಕೆ ಆಕೆಯ ಪತಿ ಶೋಯಿಬ್ ಸಹಕಾರ ನೀಡಿದ್ದ. ಅಲ್ಲದೆ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸತ್ತಾರ್ ಮತ್ತು ಮರಳು ದಂಧೆಕೋರ ಶಾಫಿ ನಂದಾವರ ಸೇರಿಕೊಂಡು ಮುಮ್ತಾಜ್ ಆಲಿಯವರನ್ನು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ತೊಡಗಿದ್ದರು. ಕಳೆದ 3-4 ತಿಂಗಳಿನಿಂದ 50 ಲಕ್ಷಕ್ಕೂ ಹೆಚ್ಚು ದುಡ್ಡನ್ನು ಪೀಕಿಸಿಕೊಂಡಿರುವ ಈ ತಂಡವು, ಎರಡು ಕೋಟಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿತ್ತು.

ಇದಲ್ಲದೆ, ಮುಮ್ತಾಜ್ ಆಲಿ ತನ್ನ ಮಗುವಿನ ಜೊತೆಗೆ ಆಟವಾಡುತ್ತಿದ್ದ ವಿಡಿಯೋವನ್ನು ಮಾಡಿ, ಆರೋಪಿಗಳು ಆಲಿಯವರ ಕುಟುಂಬಸ್ಥರಿಗೆ ಕಳಿಸತೊಡಗಿದ್ದರು. ಈ ವಿಡಿಯೋ ಕಾರಣದಿಂದ ಮುಮ್ತಾಜ್ ಆಲಿ ತನ್ನ ಕುಟುಂಬಸ್ಥರ ನಡುವೆ ನಿಂದನೆಗೆ ಒಳಗಾಗಿದ್ದರು. ಇದೇ ಹಿಂಸೆಯಿಂದಾಗಿ ಮುಮ್ತಾಜ್ ಆಲಿ ಸಾಯಲು ಮುಂದಾಗಿದ್ದು ಮೊನ್ನೆ ನಡುರಾತ್ರಿಯೇ ಮನೆ ಬಿಟ್ಟು ಬಂದಿದ್ದರು. ಇದೇ ಹಿಂಸೆಯಿಂದ ನಸುಕಿನ ಹೊತ್ತಿಗೆ ಕಾರನ್ನು ಕುಳೂರಿನ ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿ ದುರಂತ ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯಕ್ಕೆ ಆರು ಮಂದಿ ಬ್ಲಾಕ್ಮೇಲರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದವರ ಪತ್ತೆಗಾಗಿ ಬಲೆ ಬೀಸಿದ್ದಾರೆ.
Mangalore Mumtaz Ali suicide, three including Blackmailer woman her husband arrested, search for prime accused.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm