ಬ್ರೇಕಿಂಗ್ ನ್ಯೂಸ್
09-10-24 07:04 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೇ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ ಎರಡು ಕಿಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ.
ಕೆಥೋಲಿಕ್ ಸಭಾ ವತಿಯಿಂದ ನಿರಂತರ ಪ್ರತಿಭಟನೆ, ಮಾಧ್ಯಮಗಳ ವರದಿ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚತ್ತುಕೊಂಡಿದೆ. ಈ ಹಿಂದೆ 2015ರಲ್ಲಿ ಎ.ಬಿ. ಇಬ್ರಾಹಿಂ ಜಿಲ್ಲಾಧಿಕಾರಿ ಆಗಿದ್ದಾಗ ಪಾವೂರು ಉಳಿಯ ದ್ವೀಪದ ಸುತ್ತ ಮರಳುಗಾರಿಕೆ ನಿಷೇಧ ಮಾಡಿದ್ದರು. ಆದರೆ ಆನಂತರ, ಹೈಕೋರ್ಟ್ ಮೂಲಕ ಮರಳು ದಂಧೆಕೋರರು ಜಿಲ್ಲಾಡಳಿತದ ಆದೇಶವನ್ನು ರದ್ದುಪಡಿಸುವಂತೆ ಮಾಡಿದ್ದರು.
ಈಗ ಹೊರಡಿಸಿರುವ ಆದೇಶದಲ್ಲಿ, ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತ ದಕ್ಕೆಗಳಲ್ಲಿ ಮರಳು ಶೇಖರಿಸುವುದನ್ನು ಮತ್ತು ವಾಹನಗಳಿಗೆ ಮರಳು ಹಂಚುವುದನ್ನು ಕೂಡ ತಕ್ಷಣದಿಂದ ನಿಷೇಧಿಸಲಾಗಿದೆ.
1) ಅಡ್ಯಾರು ಗ್ರಾಮದ ವಲಚ್ಚಿಲ್ ದಕ್ಕೆ, 2) ಅಡ್ಯಾರು ಗ್ರಾಮ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದ ದಕ್ಕೆ, 3) ನದಿಯ ದ್ವೀಪದ ಎಡಭಾಗದಲ್ಲಿರುವ ಪಾವೂರು ದಕ್ಕೆ ಮರಳುಗಾರಿಕೆಗೆ ನಿಷೇಧಿತ ಪ್ರದೇಶವಾಗಿದೆ.
ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಯಾವುದೇ ಪ್ರಕರಣಗಳು ಗಮನಕ್ಕೆ ಬಂದಲ್ಲಿ ಸಂಬಂಧಿಸಿದವರ ವಿರುದ್ಧ ನಿಯಾಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
uliya after protest. Members of Catholic Sabha, Mangaluru, and other pro-people organisations took out a marched protesting unabated illegal extraction of sand from the Netravathi riverbed thereby threatening the existence of Pavoor-Uliya Kudru (river island) on Friday, September 27.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm