ಬ್ರೇಕಿಂಗ್ ನ್ಯೂಸ್
09-10-24 11:13 pm Mangalore Correspondent ಕರಾವಳಿ
ಮಂಗಳೂರು, ಅ.9: ಕಾಂತಾರ ಸಿನೆಮಾಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ತಾಯ್ನಾಡು ಮಂಗಳೂರಿಗೆ ಬರುತ್ತಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ. ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ಈ ರಾಷ್ಟ್ರೀಯ ಪ್ರಶಸ್ತಿ ನಮ್ಮ ಇಡೀ ತಂಡಕ್ಕೆ ಸಲ್ಲಬೇಕು. 200-300 ಜನ ಒಂದು ಕೋರ್ ಟೀಮ್ ಆಗಿ ಕೆಲಸ ಮಾಡಿದ್ದೇವೆ. ಈ ಸಿನಿಮಾ ದೈವದ ಬಗ್ಗೆ, ದೈವ ನರ್ತಕರ ಬಗ್ಗೆ ಅವರ ಸಮುದಾಯದ ಬಗ್ಗೆ ಇರುವ ಸಿನಿಮಾ. ನ್ಯಾಷನಲ್ ಅವಾರ್ಡ್ ಕ್ರೆಡಿಟ್ ದೈವ ನರ್ತಕ ಸಮುದಾಯಕ್ಕೆ ಸೇರಬೇಕು ಎಂದಿದ್ದಾರೆ.
ದೈವದ ಆಶೀರ್ವಾದ ಇಲ್ಲ ಅಂದಿದ್ರೆ ಸಿನಿಮಾ ಈ ಮಟ್ಟಕ್ಕೆ ಹೋಗುತ್ತಾ ಇರಲಿಲ್ಲ. ದೈವದ ಆಶೀರ್ವಾದದಿಂದ ಸಿನಿಮಾ ಇಲ್ಲಿ ತನಕ ಬಂದಿದೆ. ಆ ದೈವಕ್ಕೆ, ದೈವದ ಪಾದಕ್ಕೆ ಈ ಅವಾರ್ಡನ್ನ ಡೆಡಿಕೇಟ್ ಮಾಡುತ್ತೇನೆ. ಚಿತ್ರ ಮಾಡುವಾಗ ಅವಾರ್ಡ್ ಬರುತ್ತೆ ಎಂದು ಅಂದುಕೊಂಡಿರಲಿಲ್ಲ, ಎಲ್ಲಾ ಜನರ ಪ್ರೀತಿಯಿಂದ ಇದು ಸಾಧ್ಯವಾಗಿದೆ. ಕಾಂತಾರ 1 ಶೂಟಿಂಗ್ ನಡೆಯುತ್ತಿದೆ, ಆದಷ್ಟು ಬೇಗ ನಿರ್ಮಾಪಕರು ರಿಲೀಸ್ ಡೇಟ್ ಅನೌನ್ಸ್ ಮಾಡ್ತಾರೆ. ಕಾಂತಾರ 1ನೇ ಭಾಗ ಬಹಳ ಚೆನ್ನಾಗಿ ಮೂಡಿಬರುತ್ತಿದೆ. ಈ ಹಿಂದೆ ಕಾಂತಾರಕ್ಕೆ ಎಷ್ಟು ಹೆಮ್ಮೆ ಪಟ್ಟಿದ್ದೀರೋ ಅದಕ್ಕಿಂತ ಹೆಚ್ಚು ಹೆಮ್ಮೆ ಪಡುತ್ತೀರ.. ಎಂದು ರಿಷಭ್ ಶೆಟ್ಟಿ ಹೇಳಿದ್ದಾರೆ.





ಕಾಂತಾರ ಸಿನಿಮಾ ಬಳಿಕ ವಿವಿಧ ವೇದಿಕೆಯಲ್ಲಿ ಮನೋರಂಜನೆಗಾಗಿ ದೈವಾರಾಧನೆಗೆ ಅಪಮಾನ ಮಾಡಿರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂತಾರ ಬರುವ ಮುಂಚೆ ಸುಮಾರು ಸಿನಿಮಾಗಳಲ್ಲಿ ದೈವಾರಾಧನೆ ವಿಚಾರ ಬಂದಿದೆ. ಚೋಮನ ದುಡಿಯಿಂದ ಇಲ್ಲಿಯ ವರೆಗೆ ಅನೇಕ ಟಿವಿ ಧಾರಾವಾಹಿಗಳಲ್ಲೂ ದೈವಾರಾಧನೆ ಪ್ರದರ್ಶನವಾಗಿದೆ. ನಾವು ಮೊದಲ ಬಾರಿಗೆ ಮಾಡಿದ್ದಲ್ಲ. ಹಲವಾರು ಭಾಗಗಳಲ್ಲಿ ಪ್ರದರ್ಶನವನ್ನೂ ಮಾಡಿದ್ದಾರೆ. ಎಷ್ಟೋ ತುಳು ಸಿನಿಮಾಗಳು ದೈವಾರಾಧನೆ ಬಳಸಿಕೊಂಡು ಪ್ರಶಸ್ತಿ ಪಡೆದಿವೆ. ಸಿನಿಮಾ ಬಂದಾಗ ತುಂಬಾ ಪಾಪ್ಯುಲರ್ ಆದಾಗ ಮೂಲ ಸಂಸ್ಕೃತಿ ಬಗ್ಗೆ ಗೊತ್ತಿಲ್ಲದವರು ಈ ರೀತಿ ಮಾಡುತ್ತಾರೆ. ಬೇರೆ ಬೇರೆ ಸ್ಟೇಜ್ ಗಳಲ್ಲಿ ಕಾರ್ಯಕ್ರಮದಲ್ಲಿ ದೈವದ ವೇಷ ಹಾಕುವಾಗ ನೋವಾಗುತ್ತೆ.
ನಾನು ಗುತ್ತಿನ ಮನೆಯವನಾಗಿ ದೈವವನ್ನ ನಂಬಿಕೆ ಇಟ್ಟುಕೊಂಡು ಪೂಜೆ ಮಾಡಿಕೊಂಡು ಬರುವವನು. ನಾವು ಸಿನಿಮಾ ಮಾಡಬೇಕಾದರೆ ಆ ಸಮುದಾಯದವರ ಸಹಾಯ ಪಡೆದು ಮಾಡಿದ್ದೇವೆ. ಅಷ್ಟು ಶ್ರದ್ಧೆಯಿಂದ ಅದನ್ನ ಮಾಡಿಕೊಂಡು ಬಂದಿದ್ದೇವೆ. ನಮಗೆ ಕೇವಲ ಅದೊಂದು ಸಿನಿಮಾ ಅಲ್ಲ. ಸಿನಿಮಾದಲ್ಲಿ ಬಣ್ಣ ಹಚ್ಚುತ್ತೇವೆ, ವೇಷ ಹಾಕುತ್ತೇವೆ ಅನ್ನೋ ರೀತಿಯಲ್ಲ. ನಿಜವಾಗಲೂ ಅದೊಂದು ದೈವದ ಸೇವೆ ಅನ್ನೋ ರೀತಿ ಮಾಡಿಕೊಂಡು ಬಂದಿದ್ದೇವೆ. ಹೊರಗಿನವರು ಇದನ್ನ ಅಪಹಾಸ್ಯ ಮಾಡಿದಾಗ ನಂಬಿದವರಿಗೆ ಬೇಜಾರಾಗೋದು ಸಹಜ. ನಾನು ಆರಂಭದಿಂದಲೂ ಜನರಲ್ಲಿ ಮನವಿ ಮಾಡಿಕೊಂಡು ಬಂದಿದ್ದೇನೆ. ನಾನು ಕಾಂತಾರವನ್ನ ಸಿನಿಮಾದ ರೀತಿಯಲ್ಲಿ ಮಾಡಿಲ್ಲ. ಹೊರಗಿನವರಿಗೆ ದೈವವನ್ನ ಸ್ಟೇಜ್ ಮೇಲೆ ಅನುಕರಣೆ ಮಾಡಬೇಡಿ ಎಂದು ಮನವಿ ಮಾಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕಾಂತಾರ 1 ನಲ್ಲಿ ಜೂನಿಯರ್ ಎನ್ ಟಿ ಆರ್ ಮತ್ತು ಮಲಯಾಳಂ ಸ್ಟಾರ್ ಮೋಹನ್ ಲಾಲ್ ನಟಿಸಿದ್ದಾರೆಯೇ ಎಂದು ಕೇಳಿದ್ದಕ್ಕೆ, ಮೋಹನ್ ಲಾಲ್, ಎನ್ ಟಿ ಆರ್ ಸಿನೆಮಾದಲ್ಲಿ ನಟನೆ ಮಾಡಿದ್ದಾರೆ ಎನ್ನುವುದೆಲ್ಲ ರೂಮರ್, ಅದಕ್ಕೆ ಕಿವಿ ಕೊಡಬೇಡಿ. ಸದ್ಯಕ್ಕೆ ಸಿನಿಮಾದ ಟ್ರೈಲರ್ ರಿಲೀಸ್ ಮಾಡುವ ಪ್ಲಾನ್ ಇಲ್ಲ. ಶೂಟಿಂಗ್ ಮುಗಿಸುವ ಪ್ಲಾನ್ ನಲ್ಲಿದ್ದೇವೆ. ಶೀಘ್ರದಲ್ಲೇ ದೊಡ್ಡ ಮಟ್ಟದಲ್ಲಿ ಡೇಟ್ ಅನೌನ್ಸ್ ಮೆಂಟ್ ಕಾರ್ಯಕ್ರಮ ಮಾಡುತ್ತೇವೆ ಎಂದರು.
Rishab Shetty The National Awardwinning actor arrives to mangalore, grand welcome. Rishab Shetty got pan-India recognition for his work in 'Kantara'. Recently, he received the National Award for Best Actor in a Leading Role for the very film.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm