ಬ್ರೇಕಿಂಗ್ ನ್ಯೂಸ್
14-10-24 02:35 pm Mangalore Correspondent ಕರಾವಳಿ
ಉಳ್ಳಾಲ, ಅ.14: ಮನೆಯಂಗಳದ ಬಾವಿಯಲ್ಲಿ ವೃದ್ಧ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದ್ದು ಅಸೌಖ್ಯದಿಂದಾಗಿ ಮನನೊಂದು ವೃದ್ಧೆ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕುಜುಮಗದ್ದೆಯಲ್ಲಿ ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ವಾರಿಜ (68) ಸಾವನ್ನಪ್ಪಿದ ಮಹಿಳೆ. ವಾರಿಜ ಅವರ ಪತಿ ಸಂಜೀವ ಭಂಡಾರಿ ಅವರು ಎರಡು ವರುಷದ ಹಿಂದೆ ಸಾವನ್ನಪ್ಪಿದ್ದರು. ಅವರ ಏಕೈಕ ಪುತ್ರನಿಗೆ ಕಳೆದ ವರುಷವಷ್ಟೆ ಮದುವೆಯಾಗಿತ್ತು. ನಿನ್ನೆ ಸಂಜೆ ವಾರಿಜ ಅವರು ವಾಕಿಂಗ್ ಮಾಡಿ ಊಟ ಮಾಡಿ ಮಲಗಿದ್ದರಂತೆ. ಇಂದು ಬೆಳಗ್ಗೆ ವಾರಿಜ ಅವರು ಮನೆಯೊಳಗೆ ಕಾಣದಿದ್ದಾಗ ಮನೆ ಮಂದಿ ಹುಡುಕಾಡಿದ್ದು ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಸುತ್ತ ಕಟ್ಟೆ ಇರುವ ಬಾವಿಯಾಗಿದ್ದು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಕಡಿಮೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರ ಸಾವು
ಅಕ್ಟೋಬರ್ 5 ರಂದು ಬೆಳಗ್ಗೆ ಕೊಲ್ಯ, ಕುಜುಮಗದ್ದೆಯ ನಿವಾಸಿ ಅವಿವಾಹಿತ ಯುವಕ ಪ್ರಸಾದ್ (44) ಎಂಬವರು ಮನೆಯ ಪಕ್ಕದ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅ.4ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋಗಿದ್ದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಖಿನ್ನತೆಯಿಂದ ಆತ್ಮಹತ್ಯೆ ನಡೆಸಿರೋದಾಗಿ ಶಂಕಿಸಲಾಗಿತ್ತು. ಹತ್ತು ದಿನಗಳ ಬಳಿಕ ಅದೇ ಪರಿಸರದಲ್ಲಿ ಬಾವಿಗೆ ಬಿದ್ದು ಮತ್ತೋರ್ವ ವೃದ್ಧೆ ಸಾವನ್ನಪ್ಪಿದ್ದಾರೆ.
68 year Old woman body found inside well at ullal in Mangalore. The deceased has been identified as Varija. Varija wasn't keeping well in her health conditions.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm