ಬ್ರೇಕಿಂಗ್ ನ್ಯೂಸ್
15-10-24 05:00 pm Mangalore Correspondent ಕರಾವಳಿ
ಉಳ್ಳಾಲ, ಅ.15: ಶೃಂಗೇರಿ ಸೇರಿದಂತೆ ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಬಂದಾಗ ಮನಸ್ಸಿಗೆ ತುಂಬಾನೇ ನೆಮ್ಮದಿ ಸಿಗುತ್ತದೆ. ಹಾಗಾಗಿ ಕರಾವಳಿಗೆ ಬಂದಾಗಲೆಲ್ಲ ಇಲ್ಲಿನ ಕಾರಣಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಜೀವನ ಚೆನ್ನಾಗಿರಲಿ ಎಂದು ಪ್ರಾರ್ಥಿಸುತ್ತೇನೆಂದು ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಸೋಮವಾರ ಶಿವರಾಜ್ ಕುಮಾರ್ , ಗೀತಾ ದಂಪತಿ ಭೇಟಿ ನೀಡಿ ಅಜ್ಜನ ಕಟ್ಟೆಗೆ ಪ್ರಾರ್ಥನೆ ಸಲ್ಲಿಸಿದರು.





ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ನಟ ಶಿವರಾಜ್ ಕುಮಾರ್ ಅವರು ಶೃಂಗೇರಿ ಮಠ ಸೇರಿದಂತೆ ಕರಾವಳಿಯ ಉಡುಪಿ ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರ, ವನದೇವತೆ, ಕೊರಗಜ್ಜನ ಕ್ಷೇತ್ರಗಳನ್ನ ಸಂದರ್ಶಿಸುತ್ತಾ ಬಂದಿದ್ದೇನೆ. ಎಲ್ಲಾ ಸಾನಿಧ್ಯಗಳಿಗೂ ಭೇಟಿ ಕೊಟ್ಟಾಗ ಮನಸ್ಸಿಗೆ ತುಂಬಾ ನೆಮ್ಮದಿ ಸಿಗುತ್ತದೆ. ಸದೃಢ ನಂಬಿಕೆ ಜೊತೆ ಜೀವನ ಚೆನ್ನಾಗಿರಲಿ ಎಂದು ಭಕ್ತಿಯಿಂದ ಪ್ರಾರ್ಥಿಸಲು ಕೊರಗಜ್ಜನ ಕ್ಷೇತ್ರಕ್ಕೆ ಬಂದಿದ್ದೇನೆ. ನ.15ರ ಆಸುಪಾಸಿನಲ್ಲಿ ಅರ್ಜುನ್ ಜನ್ಯ ನಿರ್ದೇಶಿಸಿರುವ ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ. ಶೆಟ್ಟಿ ಜತೆ ತಾನು ನಟಿಸಿರುವ ಫಾರ್ಟಿ ಫೈವ್ ಚಿತ್ರ ತೆರೆ ಕಾಣಲಿದೆ. ಮತ್ತೊಂದು ಚಿತ್ರ ನಿರ್ಮಾಣದ ಬಗ್ಗೆಯೂ ಸಿದ್ಧತೆ ನಡೆದಿದ್ದು ಶೀಘ್ರವೇ ಪ್ರಾಜೆಕ್ಟ್ ಆರಂಭವಾಗಲಿದೆ ಎಂದರು.
ಈ ವೇಳೆ ಚಿತ್ರ ನಿರ್ಮಾಪಕರಾದ ಶ್ರೀಕಾಂತ್, ರಾಜೇಶ್ ಭಟ್, ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದು ಶಿವರಾಜ್ ಕುಮಾರ್ ದಂಪತಿಯನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
Renowned actor Shivaraj Kumar, accompanied by his wife Geeta, visited Kuthar Koragajja’s birthplace in Dekkad, Kuthar Mangalore and interacted with the press. The couple performed a special puja, seeking blessings for the success of the actor’s upcoming film, 'Bhairathi Ranagal', set to release statewide in Karnataka on November 15 under the Geetha Pictures banner.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm