ಬ್ರೇಕಿಂಗ್ ನ್ಯೂಸ್
20-10-24 07:49 pm Mangalore Correspondent ಕರಾವಳಿ
ಮಂಗಳೂರು, ಅ.20: ನಗರದ ನಂತೂರು ಹೆದ್ದಾರಿಯಲ್ಲಾದ ರಸ್ತೆ ಅಪಘಾತದಲ್ಲಿ ಮತ್ತೊಬ್ಬರ ಜೀವ ಆಹುತಿಯಾಗಿದೆ. ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದ ಯುವತಿಗೆ ಟಿಪ್ಪರ್ ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.
ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಮೃತರು. ಇವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದ ಕಡೆಯಿಂದ ಪಂಪ್ವೆಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಮೀನು ಸಾಗಿಸುವ ಕಂಟೇನರ್ ಲಾರಿ ಡಿಕ್ಕಿಯಾಗಿದೆ. ಚಾಲಕನ ಅಜಾಗರೂಕತೆ ಮತ್ತು ಅತಿ ವೇಗದ ಚಾಲನೆಯಿಂದಾಗಿ ಕ್ರಿಸ್ತಿ ಚಲಾಯಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿಯಾಗಿದ್ದು ಹಿಂದಿನ ಚಕ್ರಕ್ಕೆ ಸಿಲುಕಿದ ಕ್ರಿಸ್ತಿ ಸ್ಥಳದಲ್ಲೇ ದುರಂತ ಸಾವಿಗೀಡಾಗಿದ್ದಾರೆ.
ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತೂರಿನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಈ ಹೊತ್ತಿನಲ್ಲಿ ಲಾರಿ ಚಾಲಕರು ನಿರ್ಲಕ್ಷ್ಯದಿಂದ ವಾಹನ ಚಲಾಯಿಸುತ್ತಿರುವುದು ಅಪಘಾತಕ್ಕೆ ಕಾರಣವಾಗುತ್ತಿದೆ.
Mangalore Nanthoor accident, 27 year old girl Christy Crasta dies on spot. Christy was from kodikal and she was on her way home while fish container rammed her two wheeler and she was killed on spot.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm