ಬ್ರೇಕಿಂಗ್ ನ್ಯೂಸ್
22-10-24 05:29 pm Mangalore Correspondent ಕರಾವಳಿ
ಉಳ್ಳಾಲ, ಅ.22: ತೊಕ್ಕೊಟ್ಟಿನ ರೈಲು ಹಳಿಗಳಲ್ಲಿ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರವು ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ರೈಲ್ವೇ ಇಲಾಖೆ ಮಾತ್ರವಲ್ಲದೆ ರೈಲ್ವೇ ಪೊಲೀಸರು ಕೂಡ ಕೇಂದ್ರ ಸರಕಾರದ ಅಧೀನಕ್ಕೆ ಬರುತ್ತಾರೆಂಬ ಕನಿಷ್ಠ ಜ್ಞಾನವಿಲ್ಲದ ಶಾಸಕರು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕೆಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದ್ದಾರೆ.
ತೊಕ್ಕೊಟ್ಟಿನ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಅಶ್ರಫ್ ಕೆ.ಸಿ ರೋಡ್ ಮಾತನಾಡಿ ರೈಲ್ವೇ ಅಧಿಕಾರಿಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹೊರ ರಾಜ್ಯದ ವಲಸೆ ಕಾರ್ಮಿಕರ ಮಕ್ಕಳು ರೈಲ್ವೇ ಹಳಿಗಳಲ್ಲಿ ಕಲ್ಲುಗಳನ್ನ ಇಟ್ಟಿರುವುದಾಗಿ ಮಾಹಿತಿ ತಿಳಿದುಬಂದಿದೆ. ಆದರೆ ಈ ವಿಚಾರದಲ್ಲಿ ಉನ್ನತ ಮಟ್ಟದ ತನಿಖೆ ಅಗತ್ಯವಿದೆ. ಬಿಜೆಪಿ ಅಧಿಕಾರದಲ್ಲಿರುವ ಹೊರ ರಾಜ್ಯಗಳಿಂದಲೇ ಹೆಚ್ಚಿನ ವಲಸೆ ಕಾರ್ಮಿಕರು ಇಲ್ಲಿಗೆ ಬರುತ್ತಿದ್ದಾರೆ. ಅವರ ಮಕ್ಕಳೇ ಹಳಿಗಳಲ್ಲಿ ಕಲ್ಲು ಇಟ್ಟಿರುವುದು ಎಷ್ಟು ಸತ್ಯವೆಂದು ಕೂಲಂಕುಷ ತನಿಖೆ ನಡೆಸಬೇಕು. ಇದೊಂದು ದೇಶದ್ರೋಹಿ ಕೃತ್ಯವೂ ಆಗಿರಬಹುದು. ಆದರೆ ಓರ್ವ ಜವಾಬ್ದಾರಿಯುತ ಶಾಸಕರು ಇಂತಹ ವಿಚಾರದಲ್ಲಿ ಕಾಟಾಚಾರದ ರಾಜಕೀಯ ಹೇಳಿಕೆಗಳನ್ನ ಕೊಡಬಾರದು. ದೇಶದ ಭದ್ರತೆಗೆ ಧಕ್ಕೆ ತರುವ ದುಷ್ಕೃತ್ಯಗಳನ್ನ ಎಲ್ಲರೂ ಒಟ್ಟಾಗಿ ವಿರೋಧಿಸಬೇಕು ಎಂದರು.
ಶಾಸಕ ವೇದವ್ಯಾಸ ಕಾಮತ್ ಅವರು ತೊಕ್ಕೊಟ್ಟಿನ ರೈಲ್ವೇ ಹಳಿಯ ಪ್ರಕರಣದಲ್ಲಿ ರಾಜ್ಯ ಸರಕಾರವನ್ನ ನಡುವಿಗೆಳೆದು ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ. ಇಷ್ಟಲ್ಲದೆ ದೇಶದಲ್ಲಿ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಹೇಳಿಕೆ ನೀಡಿ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ದೇಶದಲ್ಲಿ ನಿಮ್ಮ ಬಿಜೆಪಿ ಸರಕಾರದ ಆಡಳಿತವೇ ನಡೆಯುತ್ತಿದೆ. ಇಷ್ಟಾದರೂ ಬಾಂಗ್ಲಾ ವಲಸಿಗರು ಇಲ್ಲಿದ್ದಾರೆಂದರೆ ವೈಫಲ್ಯ ಯಾರದ್ದು ಎಂದು ಪ್ರಶ್ನಿಸಿದರು. ಬಿಜೆಪಿ ಆಡಳಿತವಿರುವ ಗುಜರಾತ್ ರಾಜ್ಯದ ಸೂರತ್ ನಲ್ಲಿ ರೈಲ್ವೇ ಹಳಿಗಳನ್ನ ತಪ್ಪಿಸಿದ ಘಟನೆ ನಡೆದು ಆರೋಪಿಗಳನ್ನ ಬಂಧಿಸಲಾಗಿತ್ತು. ಉತ್ತರ ಪ್ರದೇಶದ ಕಾನ್ಪುರದಲ್ಲಿ ರೈಲ್ವೇ ಹಳಿಗಳಲ್ಲಿ ಗ್ಯಾಸ್ ಸಿಲಿಂಡರ್ ಇಡಲಾಗಿದ್ದು ಆ ಪ್ರಕರಣದಲ್ಲೂ ಆರೋಪಿಗಳ ಬಂಧನ ನಡೆದಿತ್ತು. ದೇಶದ ಭದ್ರತೆಯ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಲಾಭಕ್ಕೆ ಯಾವುದೇ ಸಮುದಾಯವನ್ನ ಎತ್ತಿ ಕಟ್ಟಬಾರದು. ಶಾಸಕ ವೇದವ್ಯಾಸ್ ಕಾಮತರ ಹೇಳಿಕೆಯು ರಾಜಕೀಯ ಪ್ರಬುದ್ಧತೆಗೆ ಶೋಭೆ ಅಲ್ಲ ಎಂದರು.
ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಮಂಗಳೂರು ಕೆಥೋಲಿಕ್ ಮಹಾಸಭಾ ಅಧ್ಯಕ್ಷ ಆಲ್ವಿನ್ ಡಿಸೋಜ, ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷ ದಿನೇಶ್ ರೈ, ಮಹಿಳಾ ಕಾಂಗ್ರೆಸ್ ಕ್ಷೇತ್ರ ಅಧ್ಯಕ್ಷೆ ಚಂದ್ರಿಕಾ ರೈ, ಮುನ್ನೂರು ಗ್ರಾ.ಪಂ ಮಾಜಿ ಅಧ್ಯಕ್ಷ ವಿಲ್ಪ್ರೆಡ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮನ್ಸೂರ್ ಮಂಚಿಲ ಉಪಸ್ಥಿತರಿದ್ದರು.
Mangalore Stone on railway track at Thokottu, central government is showing negligence says block congress in ullal. On Saturday night, miscreants placed stones on the railway tracks near Ganesh Nagar, Thokkottu overbridge, causing an incident that left locals startled when the train passed over them.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm