ಬ್ರೇಕಿಂಗ್ ನ್ಯೂಸ್
24-10-24 05:15 pm Mangalore Correspondent ಕರಾವಳಿ
ಮಂಗಳೂರು, ಅ.24: ರಾಜ್ಯದ ಕರಾವಳಿಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಗೋವಾ ಮಾದರಿಯಲ್ಲಿ ಹೆಸರಾಂತ ಬೀಚ್‌ಗಳಲ್ಲಿ ಮದ್ಯ ಮಾರಾಟ ಮತ್ತು ಸೇವನೆಗೆ ಅನುಮತಿ ನೀಡುವ ಪ್ರಸ್ತಾಪಗಳಿದ್ದು ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ, ಮಂಗಳೂರಿನ ಮಾಜಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ನಿಯಮಗಳನ್ನು ಸರಳಗೊಳಿಸಬೇಕಾಗಿದೆ, ಬೀಚ್ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ. ಅಲ್ಲದೆ, ಸಮುದ್ರ ತೀರಗಳಲ್ಲಿ ಸುರಕ್ಷತೆ ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್ ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ತಡರಾತ್ರಿ ವರೆಗೂ ಬೀಚ್ ಎಂಟ್ರಿಗೆ ಮನವಿ
ತಡರಾತ್ರಿ ವರೆಗೂ ಬೀಚ್‌ಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮನವಿ ಮಾಡಿದ್ದು, ಮಂಗಳೂರು ನಗರದಲ್ಲಿ ರೆಸ್ಟೋರೆಂಟ್‌ಗಳು ಮತ್ತು ಇತರ ಪರವಾನಗಿ ಪಡೆದ ವ್ಯಾಪಾರ ಸಂಸ್ಥೆಗಳ ವ್ಯವಹಾರದ ಸಮಯವನ್ನು ರಾತ್ರಿ 1 ಗಂಟೆಯ ವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ನಗರ ವ್ಯಾಪ್ತಿಯ ಬೀಚ್‌ಗಳಲ್ಲಿ ತಡರಾತ್ರಿ ವರೆಗೆ ಇರಲು ಅವಕಾಶ ಒದಗಿಸಬೇಕಾಗಿದೆ ಎಂದು ಹೇಳಿದರು. ಪ್ರವಾಸೋದ್ಯಮ ಯೋಜನೆಗಳಿಗೆ ಸಿಆರ್‌ಝಡ್ ಮತ್ತು ಇತರ ಅನುಮತಿಗಳನ್ನು ಶೀಘ್ರವಾಗಿ ಪಡೆಯಲು ಪ್ರವಾಸೋದ್ಯಮ ಇಲಾಖೆ ಶೀಘ್ರದಲ್ಲೇ ಸೌಲಭ್ಯ ಕೇಂದ್ರವನ್ನು ತೆರೆಯಲಿದೆ ಎಂದು ರಾಜೇಂದ್ರ ಕೆವಿ ಮಾಹಿತಿ ನೀಡಿದ್ದಾರೆ. ಹೊಸ ಪ್ರವಾಸೋದ್ಯಮ ನೀತಿ ಕರಾವಳಿ ಪ್ರವಾಸೋದ್ಯಮಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಹೊಂದಿರಲಿದೆ. ಪ್ರವಾಸೋದ್ಯಮ ಅಭಿವೃದ್ಧಿ ಪ್ರಯತ್ನಗಳ ಭಾಗವಾಗಿ ಬಟ್ಟಪಾಡಿ ಬೀಚ್‌ನಿಂದ ಸಸಿಹಿತ್ಲು ಬೀಚ್ ವರೆಗಿನ ಕರಾವಳಿ ಪ್ರದೇಶದ ಅಭಿವೃದ್ಧಿಗೆ ನೀಲ ನಕ್ಷೆ ಸಿದ್ದಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
Liquor sale near in beaches like Goa to be implemented in Mangalore says karnataka tourism department.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm