ಬ್ರೇಕಿಂಗ್ ನ್ಯೂಸ್
25-10-24 01:26 pm Mangalore Correspondent ಕರಾವಳಿ
ಮಂಗಳೂರು, ಅ.25: ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಸಂತ್ರಸ್ತ ಯುವತಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮುನ್ನ ಮುಸ್ಲಿಂ ಯುವಕನಿಂದ ಅತ್ಯಾಚಾರಕ್ಕೀಡಾಗುವ ಬದಲು ನಾನೇ ಸಾಯುತ್ತೇನೆಂದು ಆಕೆ ಡೆತ್ ನೋಟ್ ಬರೆದಿಟ್ಟಿದ್ದಾಳೆ.
ಸುರತ್ಕಲ್ ಇಡ್ಯಾ ಬಳಿಯ ಯುವತಿಯ ಫೇಸ್ಬುಕ್ ಹ್ಯಾಕ್ ಮಾಡಿ, ಅಶ್ಲೀಲ ಸಂದೇಶ ಕಳುಹಿಸಿದ್ದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫೇಸ್ಬುಕ್ ಹ್ಯಾಕ್ ಮಾಡಿದ್ದಲ್ಲದೆ, ಆಕೆಯ ಸೋದರನಿಗೆ ಮುಸ್ಲಿಂ ಯುವಕನ ಹೆಸರಿನಲ್ಲಿ ಮೆಸೆಂಜರ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿತ್ತು. ನಿನ್ನ ಸೋದರಿಯನ್ನು ನನ್ನ ಜೊತೆಗೆ ಕಳಿಸು, ನನ್ನೊಂದಿಗೆ ಸಹಕರಿಸಲು ಹೇಳು. ಇಲ್ಲಾಂದ್ರೆ ನಿನ್ನನ್ನು 24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ.
ಈ ಬಗ್ಗೆ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ವಿಚಾರಣೆ ನಡೆಸಿದ್ದು ಮೊಬೈಲ್ ಪರಿಶೀಲನೆ ನಡೆಸಿದ್ದರು. ನೂರ್‌ಜಹಾನ್ ಎಂಬ ಯುವಕನನ್ನು ಠಾಣೆಗೆ ಕರೆದು ಮೊಬೈಲ್ ಪರಿಶೀಲನೆ ನಡೆಸಿ ಸರಿಯಾದ ಸಾಕ್ಷ್ಯ ಸಿಗದ ಕಾರಣ ಹಿಂದಕ್ಕೆ ಕಳುಹಿಸಿದ್ದರು. ಆದರೆ ಆನಂತರವೂ ಇದೇ ರೀತಿಯ ಬೆದರಿಕೆ ಸಂದೇಶ ಬರುತ್ತಿದ್ದರಿಂದ ಯುವತಿ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಯತ್ನ ಮಾಡಿದ್ದಾಳೆ ಎನ್ನಲಾಗುತ್ತಿದೆ.
“ಒಬ್ಬ ಮುಸ್ಲಿಮನ ಕೈಯ್ಯಲ್ಲಿ ಅತ್ಯಾಚಾರವಾಗಿ ಸಾಯುವ ಬದಲು ಈಗಲೇ ಸಾಯ್ತೇನೆ. ಪೊಲೀಸರಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನ ಆಗಿಲ್ಲ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು" ಎಂದು ಡೆತ್ ನೋಟ್ ನಲ್ಲಿ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Mangalore Surathkal, girl attempts to suicide after threat on facebook messanger. She received a threat stating that she will cut into 24 pieces if she doesn't coperate to love muslim youth.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm