ಬ್ರೇಕಿಂಗ್ ನ್ಯೂಸ್
26-10-24 02:04 pm Mangalore Correspondent ಕರಾವಳಿ
ಮಂಗಳೂರು, ಅ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡ ಒಬ್ಬರು.
ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಮಾರ್ಗದರ್ಶನ ಕೊಡಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ" ಎಂದು ಹೇಳಿದ್ದಾರೆ.
Mangalore MP Brijesh Chowta appointed as member of the Consultative Committee for the Ministry of Defence.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm